ETV Bharat / state

ಚಿಗಟೇರಿ ಜಿಲ್ಲಾಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಡಿಸಿ‌ ಮಹಾಂತೇಶ್ ಬೀಳಗಿ...

author img

By

Published : Aug 1, 2020, 6:26 PM IST

ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಅವರು ಚಿಗಟೇರಿ ಜಿಲ್ಲಾಸ್ಪತ್ರೆಗೆ ದಿಢೀರ್ ಆಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Davangere
ಡಿಸಿ‌ ಮಹಾಂತೇಶ್ ಬೀಳಗಿ

ದಾವಣಗೆರೆ: ರೋಗಿಗಳಿಗೆ ಸರಿಯಾದ ಚಿಕಿತ್ಸೆ ನೀಡಲಾಗುತ್ತಿಲ್ಲ ಎಂಬ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಅವರು ಚಿಗಟೇರಿ ಜಿಲ್ಲಾಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್ ಮಾಡುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ, ಸಾಲಿನಲ್ಲಿ ನಿಂತಿದ್ದವರಿಗೆ ಸರಿಯಾಗಿ ಪರೀಕ್ಷೆ ನಡೆಸುತ್ತಿದೆಯಾ ಎಂದು ಪ್ರಶ್ನಿಸಿದರು. ಕೊರೊನಾ ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿ ಇದ್ದವರು ಗಂಟಲು ದ್ರವ ಪರೀಕ್ಷೆಗೆ ಬಂದಿದ್ದರು. ಸರಿಯಾಗಿ ಟೆಸ್ಟ್ ನಡೆಸುತ್ತಿದ್ದಾರಾ ಇಲ್ಲವಾ ಎಂದು ರೋಗಿಗಳ ಸಂಬಂಧಿಕರನ್ನು ಕೇಳಿದರು. ಈ ವೇಳೆ 9 ತಿಂಗಳ ಗರ್ಭಿಣಿಯ ಪತಿ ಸಾಲಿನಲ್ಲಿ ನಿಂತಿದ್ದಾಗ ಆದಷ್ಟು ಬೇಗ ಪರೀಕ್ಷಿಸುವಂತೆ ಡಿಸಿ ಸೂಚಿಸಿದರು.

ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಡಿಸಿ‌ ಮಹಾಂತೇಶ್ ಬೀಳಗಿ

ಬಳಿಕ ಶೌಚಾಲಯದಲ್ಲಿನ ಸ್ವಚ್ಛತೆ ಬಗ್ಗೆ ಪರಿಶೀಲನೆ ನಡೆಸಿದರು. ಜಿಲ್ಲಾಸ್ಪತ್ರೆಗೆ ಬರುವ ರೋಗಿಗಳಿಗೆ ಯಾವುದೇ ರೀತಿಯ ತೊಂದರೆ ಆಗಬಾರದು.‌ ಸೋಂಕು ಹರಡದಂತೆ ತಡೆಯಬೇಕು. ಪಾಸಿಟಿವ್ ಬಂದವರಿಗೆ ಇಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲಾ ರೀತಿಯ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು. ಸೂಕ್ತ ಚಿಕಿತ್ಸೆ ನೀಡಬೇಕು. ಯಾವ ದೂರೂ ಕೇಳಿ ಬರಬಾರದು. ಈ ನಿಟ್ಟಿನಲ್ಲಿ ಕೆಲಸ ನಿರ್ವಹಿಸಿ ಎಂದು ಆಸ್ಪತ್ರೆಯ ಸರ್ಜನ್, ವೈದ್ಯರು ಹಾಗೂ ಸಿಬ್ಬಂದಿಗೆ ಸೂಚನೆ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.