ETV Bharat / state

ಪ್ರತಿ ತಾಲೂಕಿನಲ್ಲೂ ಜನಸ್ಪಂದನ ಸಭೆ: ಅಧಿಕಾರಿಗಳಿಗೆ  ಡಿಸಿ ಸೂಚನೆ

ಇಂದು ಜಿಲ್ಲಾಡಳಿತ ಭವನದಲ್ಲಿ ನಡೆದ ಜನಸ್ಪಂದನ ಸಭೆ ನಡೆಯಿತು. ಸಭೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್​ ಬೀಳಗಿ, ಇನ್ಮುಂದೆ ಎಲ್ಲಾ ತಾಲೂಕುಗಳಲ್ಲಿ ತಹಶೀಲ್ದಾರ್​ ನೇತೃತ್ವದಲ್ಲಿ ಜನಸ್ಪಂದನ ಸಭೆ ನಡೆಸಬೇಕೆಂದು ಅಧಿಕಾರಿಗಳಿಗೆ ಆದೇಶ ನೀಡಿದ್ರು.

District commissioner
ಜಿಲ್ಲಾಧಿಕಾರಿ ಮಹಾಂತೇಶ್​ ಬೀಳಗಿ
author img

By

Published : Jan 27, 2020, 10:20 PM IST

ದಾವಣಗೆರೆ: ಪ್ರತಿ ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜನಸ್ಪಂದನ ಸಭೆ ನಡೆಸುತ್ತಿದ್ದು, ಇನ್ಮುಂದೆ ಎಲ್ಲ ತಾಲೂಕುಗಳಲ್ಲಿ ತಹಶೀಲ್ದಾರರ ನೇತೃತ್ವದಲ್ಲಿ ಜನಸ್ಪಂದನ ಸಭೆ ನಡೆಸಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ್​ ಬೀಳಗಿ ಆದೇಶಿಸಿದರು.

ಜಿಲ್ಲಾಧಿಕಾರಿ ಮಹಾಂತೇಶ್​ ಬೀಳಗಿ

ಜಿಲ್ಲಾಡಳಿತ ಭವನದಲ್ಲಿ ನಡೆದ ಜನಸ್ಪಂದನ ಸಭೆಯಲ್ಲಿ ಜನರ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದ ಅವರು, ಜನಸ್ಪಂದನ ಸಭೆಗೆ ಬೇರೆ ಬೇರೆ ಊರುಗಳಿಂದ ಜನರು ಬಂದು ಮನವಿ ಮತ್ತು ದೂರುಗಳನ್ನು ನೀಡುತ್ತಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಇನ್ಮುಂದೆ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ತಹಶೀಲ್ದಾರರ ನೇತೃತ್ವದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಹಭಾಗಿತ್ವದೊಂದಿಗೆ ಜನಸ್ಪಂದನ ಸಭೆಗಳನ್ನು ನಡೆಸುವಂತೆ ತಿಳಿಸಿದರು.

ಇದೇ ವೇಳೆ, ಕುಂದವಾಡ ಗ್ರಾಮದ ನಿವಾಸಿ ಹಾಲಮ್ಮ ಎಂಬುವವರು ಗ್ರಾಮದಲ್ಲಿ ಜಾಗವನ್ನು ಕ್ರಯಕ್ಕೆ ತೆಗೆದಿಕೊಂಡಿದ್ದು, ಖಾತೆ ವರ್ಗಾವಣೆ ಮಾಡಿಸಿಕೊಂಡಿಲ್ಲ. ತನ್ನ ಹೆಸರಿಗೆ ಖಾತೆ ವರ್ಗಾವಣೆ ಮಾಡಿಸಿಕೊಡುವಂತೆ ಮನವಿ ಸಲ್ಲಿಸಿದರು. ಇದಕ್ಕೆ ಜಿಲ್ಲಾಧಿಕಾರಿ ಪ್ರತಿಕ್ರಿಯಿಸಿ, ಮಹಾನಗರಪಾಲಿಕೆ ಒಬ್ಬ ಸಿಬ್ಬಂದಿಯನ್ನು ಕಳುಹಿಸಿ, ಸ್ಥಳ ಪರಿಶೀಲನೆ ನಡೆಸಿ ಮುಂದಿನ 7 ದಿನಗಳೊಳಗೆ ಖಾತೆ ವರ್ಗಾವಣೆ ಮಾಡಿಸಿಕೊಂಡುವಂತೆ ಮಹಾನಗರಪಾಲಿಕೆ ಆಯುಕ್ತರಿಗೆ ಸೂಚನೆ ನೀಡಿದರು.

ಇನ್ನು ಸಭೆಯಲ್ಲಿ ವಿವಿಧ ತಾಲೂಕುಗಳಿಂದ ಬಂದ ಜನರು ತಮ್ಮ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಡಿಸಿ ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ಸಲಹೆ ನೀಡಿದ್ರು.

Intro:ದಾವಣಗೆರೆ ; ಪ್ರತಿ ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜನಸ್ಪಂದನ ಸಭೆ ನಡೆಸುತ್ತಿದ್ದು, ಇನ್ನು ಮುಂದೆ ಎಲ್ಲಾ ತಾಲ್ಲೂಕುಗಳಲ್ಲಿ ತಹಶೀಲ್ದಾರರ ನೇತೃತ್ವದಲ್ಲಿ ಜನಸ್ಪಂದನ ಸಭೆ ನಡೆಸಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶಿಸಿದರು.

Body:ಸೋಮವಾರ ಜಿಲ್ಲಾಡಳಿತ ಭವನದಲ್ಲಿ ನಡೆದ ಜನಸ್ಪಂದನ ಸಭೆಯಲ್ಲಿ ಜನರ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದ ಅವರು, ಜನಸ್ಪಂದನ ಸಭೆಗೆ ಬೇರೆ ಬೇರೆ ಊರುಗಳಿಂದ ಜನರು ಬಂದು ಮನವಿ ಮತ್ತು ದೂರುಗಳನ್ನು ನೀಡುತ್ತಿದ್ದಾರೆ. ಸಾರ್ವಜನಿಕರ ಹಿತದೃಷ್ಠಿಯಿಂದ ಇನ್ನು ಮುಂದೆ ದಾವಣಗೆರೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ತಹಶೀಲ್ದಾರರ ನೇತೃತ್ವದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಹಭಾಗಿತ್ವದೊಂದಿಗೆ ತಾಲ್ಲೂಕು ಮಟ್ಟದ ಜನಸ್ಪಂದನ ಸಭೆಗಳನ್ನು ನಡೆಸುವಂತೆ ತಿಳಿಸಿದರು.

ಕುಂದವಾಡ ಗ್ರಾಮದ ನಿವಾಸಿ ಹಾಲಮ್ಮ ಎಂಬುವವರು, ತಾವು ತಮ್ಮ ಗ್ರಾಮದಲ್ಲಿ ಜಾಗವನ್ನು ಕ್ರಯಕ್ಕೆ ತೆಗೆದಿಕೊಂಡಿದ್ದು, ಖಾತೆ ವರ್ಗಾವಣೆ ಮಾಡಿಸಿಕೊಂಡಿಲ್ಲ. ತನ್ನ ಹೆಸರಿಗೆ ಖಾತೆ ವರ್ಗಾವಣೆ ಮಾಡಿಸಿಕೊಡುವಂತೆ ಮನವಿ ಸಲ್ಲಿಸಿದರು.
ಜಿಲ್ಲಾಧಿಕಾರಿ ಪ್ರತಿಕ್ರಿಯಿಸಿ, ಮಹಾನಗರಪಾಲಿಕೆ ಒಬ್ಬ ಸಿಬ್ಬಂದಿಯನ್ನು ಕಳುಹಿಸಿ, ಸ್ಥಳ ಪರಿಶೀಲನೆ ನಡೆಸಿ ಮುಂದಿನ 7 ದಿನಗಳೊಳಗೆ ಖಾತೆ ವರ್ಗಾವಣೆ ಮಾಡಿಸಿಕೊಂಡುವಂತೆ ಮಹಾನಗರಪಾಲಿಕೆ ಆಯುಕ್ತರಿಗೆ ಸೂಚನೆ ನೀಡಿದರು.

ಪ್ರತಿಸ್ಪಂದನ: ಜನಸ್ಪಂದನ ಸಭೆಗೆ ವೃದ್ಧೆಯೋರ್ವರು ಬಂದು ತಾವು ಕಳೆದ ಜನಸ್ಪಂದನ ಸಭೆಗೆ ಆಗಮಿಸಿ ಪಿಂಚಣಿ ಬಂದಿಲ್ಲ ಎಂದು ದೂರು ನೀಡಿದ್ದೆ. ಈ ತಿಂಗಳು ನನಗೆ 5 ರಿಂದ 6 ತಿಂಗಳ ಬಾಕಿ ಪಿಂಚಣಿ ಹಣ ತಮ್ಮ ಖಾತೆಗೆ ಪಾವತಿಯಾಗಿದೆ ಎಂದು ಜಿಲ್ಲಾಧಿಕಾರಿಗಳಿಗೆ ಧನ್ಯವಾದ ತಿಳಿಸಿದರು.

ಜನಸ್ಪಂದನ ಸಭೆ ದುರುಪಯೋಗ ಸಲ್ಲದು : ದಾವಣಗೆರೆ ನಿವಾಸಿ ತಹಸೀನಾ ಕೌಸರ್, ತಮ್ಮ ಗಂಡ ತನ್ನಿಂತ ದೂರವಾಗಿದ್ದು, ಆತನೊಂದಿಗೆ ಜೀವನ ನಡೆಸಲು ಕಾನೂನು ಮೂಲಕ ಸಹಾಯ ನೀಡಬೇಕು ಎಂದು ಕಳೆದ 1 ತಿಂಗಳಿಂದ ದೂರು ನೀಡುತ್ತಿದ್ದರೂ ಸಹಾಯ ದೊರೆತಿಲ್ಲ. ಮುಂದಿನ ದಿನಗಳಲ್ಲಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದರು. ಜಿಲ್ಲಾಧಿಕಾರಿ ಪ್ರತಿಕ್ರಿಯಿಸಿ ಆತ್ಮಹತ್ಯೆ ಎಲ್ಲದಕ್ಕೂ ಪರಿಹಾರ ಅಲ್ಲ. ಜೀವನದಲ್ಲಿ ಆತ್ಮಸ್ಥೈರ್ಯವೊಂದಿದ್ದರೆ ಎನನ್ನಾದರೂ ಸಾಧಿಸಲು ಸಾಧ್ಯ. ಅದನ್ನು ಬಿಟ್ಟು ಸಾಯುತ್ತೇನೆ ಎನ್ನುವುದು ಮೂರ್ಖತನ ಎಂದು ಅಸಮಾಧಾನ ವ್ಯಕ್ತ ಪಡಿಸಿದರು. ಜನಸ್ಪಂದನ ಸಭೆಯನ್ನು ಈ ರೀತಿ ದುರುಪಯೋಗ ಪಡಿಸಿಕೊಳ್ಳುವುದು ಶೋಭೆಯಲ್ಲ. ನಾನು ಜನರ ಅನುಕೂಲಕ್ಕಾಗಿ, ಒಳಿತಿಗಾಗಿ ಹಾಗೂ ಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುವ ಉದ್ದೇಶದಿಂದ ಜನಸ್ಪಂದನ ಸಭೆಯನ್ನು ಪ್ರತಿ ವಾರ ನಡೆಸುವುದು. ಈ ಸಭೆಯಲ್ಲಿ ಬಂದು ಹೀಗೆ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ನನ್ನ ಜನ ಪರ ಕಾಳಜಿಯನ್ನು ದುರುಪಯೋಗ ಪಡಿಸಿಕೊಳ್ಳುವುದು ಒಳ್ಳೆಯದಲ್ಲ ಎಂದು ತಿಳಿ ಹೇಳಿದರು.

ಪ್ಲೊ..

ಬೈಟ್; ಮಹಾಂತೇಶ್ ಬಿಳಗಿ . ಜಿಲ್ಲಾಧಿಕಾರಿ..Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.