ಬಳ್ಳಾರಿ: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿರುವ ಘಟನೆ ಹರಪನಹಳ್ಳಿ ತಾಲೂಕಿನ ಹುಲಿಕಟ್ಟೆ ಗ್ರಾಮದ ಬಳಿ ಪತ್ತೆಯಾಗಿದೆ.
ಹುಲಿಕಟ್ಟೆ ಗ್ರಾಮದ ಗೋಣೆಪ್ಪ ಎಂಬುವರಿಗೆ ಸೇರಿದ ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿರುವ ಶವ ಸಂಪೂರ್ಣ ಕೊಳೆತಿದೆ. ಸುಮಾರು 20 ದಿನಗಳ ಹಿಂದೆ ಸಾವನ್ನಪ್ಪಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮೃತದೇಹ ಯಾರದ್ದು, ಇದು ಆತ್ಮಹತ್ಯೆಯೋ, ಕೊಲೆಯೊ ಎಂಬ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.