ETV Bharat / state

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್‌ ಸಿಗದೇ ವ್ಯಕ್ತಿ ಸಾವು?

ಸೂಕ್ತ ಸಮಯದಲ್ಲಿ ಆಕ್ಸಿಜನ್ ಸಿಗದ ಕಾರಣ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

Davangere
ಆಕ್ಸಿಜನ್‌ ಸಿಗದೇ ವ್ಯಕ್ತಿ ಸಾವು: ಆರೋಪ
author img

By

Published : Aug 27, 2020, 3:25 PM IST

ದಾವಣಗೆರೆ: ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಸಕಾಲದಲ್ಲಿ ಆಕ್ಸಿಜನ್ ಸಿಗದ ಕಾರಣ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ.

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್‌ ಸಿಗದೇ ವ್ಯಕ್ತಿ ಸಾವು?

ತಾಲೂಕಿನ ಕಕ್ಕರಗೊಳ್ಳ ಸಮೀಪದ ಕೋಡಿಹಳ್ಳಿ ಗ್ರಾಮದ ನಿವಾಸಿ ಹಾಲಪ್ಪ (40) ಮೃತ ದುರ್ದೈವಿ. ಇವರು ಅಸ್ತಮಾ ಸೇರಿದಂತೆ ಇನ್ನಿತರ ಕಾಯಿಲೆಯಿಂದ ಬಳಲುತ್ತಿದ್ದರು. ‌ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಕಾರಣ ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು. ಆಸ್ಪತ್ರೆಯಲ್ಲಿ ತಕ್ಷಣ ಚಿಕಿತ್ಸೆ ನೀಡದ ಕಾರಣ ಸಾವನ್ನಪ್ಪಿದ್ದಾರೆ ಎಂದು ಮೃತನ ಸಂಬಂಧಿಕರು ಆರೋಪಿಸಿದ್ದಾರೆ‌.

ರೋಗಿಗೆ‌ ಆಸ್ಪತ್ರೆಗೆ ದಾಖಲಿಸಿದ ತಕ್ಷಣ ವೆಂಟಿಲೇಟರ್ ಅಳವಡಿಸಿಲ್ಲ. ಇದರಿಂದಲೇ ಅವರು ಸಾವನ್ನಪ್ಪಿದ್ದಾರೆ. ಘಟನೆಗೆ ಜಿಲ್ಲಾಸ್ಪತ್ರೆಯ ವೈದ್ಯರ ನಿರ್ಲಕ್ಷ್ಯವೇ ಕಾರಣ ಅನ್ನೋದು ಸಂಬಂಧಿಕರು ಆರೋಪ.

ಆಸ್ಪತ್ರೆಗೆ ಜಿ. ಪಂ. ಸದಸ್ಯ ಬಸವಂತಪ್ಪ ಭೇಟಿ ನೀಡಿದರು. ಈ ವೇಳೆ ಮೃತನ ಸಂಬಂಧಿಕರು ಆಸ್ಪತ್ರೆಯ ಸಿಬ್ಬಂದಿ ಜೊತೆ ವಾಗ್ವಾದ ನಡೆಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.