ದಾವಣಗೆರೆ : ಶ್ರೀಕ್ಷೇತ್ರ ಹರಿಹರ ಪಂಚಮಸಾಲಿ ಪೀಠದ ಜಗದ್ಗುರು ವಚನಾನಂದ ಶ್ರೀಗಳು ಕೊಳಗೇರಿ ನಿವಾಸಿಗಳಿಗೆ ಆಹಾರದ ಕಿಟ್ ವಿತರಿಸಿದರು.
ನಗರದ ಎಪಿಎಂಸಿ ಪ್ರದೇಶ ಸೇರಿದಂತೆ ಹಲವೆಡೆ ಬಡವರು, ನಿರ್ಗತಿಕರು, ಕಷ್ಟದಲ್ಲಿರುವವರಿಗೆ ಅಕ್ಕಿ, ತೊಗರಿ ಬೇಳೆ, ಎಣ್ಣೆ ಸೇರಿದಂತೆ ಇತರೆ ಆಹಾರ ಧಾನ್ಯಗಳನ್ನು ನೀಡಿದರು.
ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಮಹಾನಗರ ಪಾಲಿಕೆಯ ಮೇಯರ್ ಅಜಯ್ ಕುಮಾರ್, ಶ್ರೀಗಳಿಗೆ ಶ್ರೀಗಳಿಗೆ ಸಾಥ್ ನೀಡಿದರು.