ದಾವಣಗೆರೆ: ಸರ್ಕಾರದ ಸೂಚನೆಯಂತೆ ಕೋವಿಡ್‍ಅನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಹಾಗೂ ಸ್ಥಳೀಯ ನಾಗರಿಕರನ್ನ ಈ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಉದ್ದೇಶದಿಂದ ವಾರ್ಡ್‍ಗಳು ಮತ್ತು ಬೂತ್ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಸಮಿತಿ ರಚಿಸಿ ಸ್ಥಳೀಯವಾಗಿ ಕಾರ್ಯಪ್ರವೃತ್ತರಾಗಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸಂಬಂಧಿಸಿದ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ಸೂಚನೆ ನೀಡಿದ್ದಾರೆ.
ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ವೈದ್ಯಕೀಯ ಸಚಿವರೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ನಂತರ ಅವರು ಮಾತನಾಡಿದರು. ಸರ್ಕಾರದ ಸೂಚನೆಯಂತೆ ಕೋವಿಡ್‍ಅನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಹಾಗೂ ಸ್ಥಳೀಯ ನಾಗರಿಕರನ್ನ ಈ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಉದ್ದೇಶದಿಂದ ವಾರ್ಡ್‍ಗಳು ಮತ್ತು ಬೂತ್ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಸಮಿತಿಯನ್ನು ರಚಿಸಿ ಸ್ಥಳೀಯವಾಗಿ ಕಾರ್ಯಪ್ರವೃತ್ತರಾಗಬೇಕು. ಆಯಾ ವಾರ್ಡ್‍ಗಳು ಮತ್ತು ಬೂತ್ ಮಟ್ಟದಲ್ಲಿ ಜಯ ಗಳಿಸಿದ ಅಭ್ಯರ್ಥಿಗಳು, ಪರಾಜಿತರಾದ ಅಭ್ಯರ್ಥಿಗಳು, ವೈದ್ಯರು, ಪೊಲೀಸರು, ಸರ್ಕಾರಿ ಅಧಿಕಾರಿಗಳು, ವಕೀಲರು, ಎಂಜಿನಿಯರ್ಗಳು, ಎನ್‍ಜಿಒ ಸೇರಿ ಇತರೆ ಜವಾಬ್ದಾರಿಯುತ ವ್ಯಕ್ತಿಗಳನ್ನೊಳಗೊಂಡ ಸಮಿತಿ ರಚಿಸಿ, ಆಯಾ ಭಾಗದಲ್ಲಿ ಕೋವಿಡ್ ನಿಯಂತ್ರಣ, ಜಾಗೃತಿ ಮತ್ತು ಇತರೆ ಚಟುವಟಿಕೆಗಳನ್ನ ಕೈಗೊಳ್ಳುವಂತೆ ಸೂಚಿಸಲಾಗಿದೆ.
ಈ ಹಿನ್ನೆಲೆಯಲ್ಲಿ ದಾವಣಗೆರೆ ಪಾಲಿಕೆ ವ್ಯಾಪ್ತಿಯಲ್ಲಿ 45 ವಾರ್ಡ್‍ಗಳು, 375 ಬೂತ್‍ಗಳಿದ್ದು, ಇಲ್ಲಿ ಸಮಿತಿಗಳ ರಚನೆಯಾಗಬೇಕು. ಜೊತೆಗೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ಗಳಲ್ಲಿ ಸಹ ಇದೇ ರೀತಿಯ ಸಮಿತಿಗಳನ್ನ ರಚಿಸಿ, ಕಾರ್ಯ ಪ್ರವೃತ್ತರಾಗಬೇಕು. ಜುಲೈ 9ರಂದು ಪಾಲಿಕೆ, ಇತರೆ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಟಾಸ್ಕ್ ಫೋರ್ಸ್ ಸಮಿತಿ ರಚಿಸುವ ಕೆಲಸ ಮುಗಿಯಬೇಕು. ಜುಲೈ 10 ಮತ್ತು 11ರಂದು ಇವರಿಗೆ ತರಬೇತಿ ನೀಡುವ ಕೆಲಸ ಆಗಬೇಕು. ಜು. 15ರಿಂದ ಈ ಟಾಸ್ಕ್ ಫೋರ್ಸ್ ಸಮಿತಿಗಳು ತಮ್ಮ ವಾರ್ಡ್ ಮತ್ತು ಬೂತ್ ಮಟ್ಟದಲ್ಲಿ ಕಾರ್ಯಾರಂಭ ಮಾಡುವಂತಾಗಬೇಕೆಂದು ಸೂಚನೆ ನೀಡಿದರು.