ದಾವಣಗೆರೆ: ಕುಡಿದ ಮತ್ತಿನಲ್ಲಿ ಬೈಕ್ ಓಡಿಸಿದ ವೈದ್ಯಕೀಯ ವಿದ್ಯಾರ್ಥಿ ಪಾದಚಾರಿಗೆ ಡಿಕ್ಕಿ ಹೊಡೆದು ಅನಾಹುತ ಸೃಷ್ಟಿಸಿದ ಘಟನೆ ನಗರದಲ್ಲಿ ನಡೆದಿದೆ.
ಬಿಇಐಟಿ ಕಾಲೇಜ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಪಾದಚಾರಿ ಗಾಯಗೊಂಡಿದ್ದಾನೆ. ಮೆಡಿಕಲ್ ವಿದ್ಯಾರ್ಥಿ ಮದ್ಯ ಸೇವಿಸಿ ಬೈಕ್ ಚಲಾಯಿಸಿಕೊಂಡು ಬಂದು ಅಪಘಾತ ಮಾಡಿದ್ದಾನೆ ಎಂಬ ಮಾಹಿತಿ ದೊರೆತಿದೆ. ಈ ವೇಳೆ ಆತ ಸ್ಥಳೀಯರ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳ ಹೇಳಿದ್ದಾರೆ. ಬಳಿಕ ಸ್ಥಳೀಯರೇ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.
ಅಪಘಾತ ಎಸಗಿದಾತ ಬಾಪೂಜಿ ಆಸ್ಪತ್ರೆಯಲ್ಲಿ ಸಹಾಯಕ ವೈದ್ಯನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.