ದಾವಣಗೆರೆ: ತಾಲೂಕಿನ ಆಲೂರು ಗ್ರಾಮದಲ್ಲಿ ಕಲ್ಲು ಕ್ವಾರಿ ನಡೆಸುತ್ತಿದ್ದ ಸ್ಥಳ ಪರಿಶೀಲನೆ ವೇಳೆ ಒಂದು ಜೀವಂತ ಎಲೆಕ್ಟ್ರಿಕಲ್ ಡಿಟೋನೇಟರ್ ಪತ್ತೆಯಾಗಿದೆ.
ಶಿವಮೊಗ್ಗ ಬಳಿಕ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜಿಲೆಟಿನ್ ಸ್ಫೋಟಗೊಂಡು ಅಮಾಯಕ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಈ ಘಟನೆಯಿಂದ ಎಚ್ಚೆತ್ತ ದಾವಣಗೆರೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು, ಆಲೂರು ಗ್ರಾಮದ ಸರ್ವೆ ನಂ. 68/9ರಲ್ಲಿ ನಡೆಯುತ್ತಿರುವ ಕಲ್ಲು ಕ್ವಾರಿಗೆ ಭೇಟಿ ನೀಡಿ ಪರಿಶೀಲಿಸಿದರು.
ಓದಿ: ಕೊನೆ ಕ್ಷಣದಲ್ಲಿ ಶಾಸಕ ಶರತ್ ಬಚ್ಚೇಗೌಡ ಜಾಣ ನಡೆ: ಕಾಂಗ್ರೆಸ್ಗೆ ಬಾಹ್ಯ ಬೆಂಬಲ ನೀಡಲು ನಿರ್ಧಾರ!
ಈ ವೇಳೆ ಒಂದು ಜೀವಂತ ಎಲೆಕ್ಟ್ರಿಕಲ್ ಡಿಟೋನೇಟರ್ ಪತ್ತೆಯಾಗಿದ್ದು, ವಶಕ್ಕೆ ಪಡೆಯಲಾಗಿದೆ. ಜೊತೆಗೆ ಆಲೂರುಹಟ್ಟಿ ಗ್ರಾಮದ ಕಲ್ಲುಕ್ವಾರಿ ಮಾಲೀಕ ಕುಮಾರನಾಯ್ಕ ಎಂಬುವರ ವಿರುದ್ಧ ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.