ETV Bharat / state

ವಿದ್ಯುತ್ ದರ ಏರಿಕೆ ಆಗಿದ್ದು ಬಿಜೆಪಿ ಅವಧಿಯಲ್ಲಿ, ನಮ್ಮ ಸರ್ಕಾರ 200 ಯೂನಿಟ್ ವಿದ್ಯುತ್ ಫ್ರೀ ನೀಡಲಿದೆ: ಸಚಿವ ಈಶ್ವರ ಖಂಡ್ರೆ - electricity price

ವಿದ್ಯುತ್ ದರ ಏರಿಕೆ, ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ಕಂಡಿಷನ್ ಹಾಕಿರುವ ವಿಚಾರವಾಗಿ ಸಚಿವ ಈಶ್ವರ ಖಂಡ್ರೆ ಮಾಧ್ಯಮಗಳೊಂದಿಗೆ ಮಾತನಾಡಿದರು.

Forest Minister Ishwar Khandre spoke to reporters.
ಅರಣ್ಯ ಸಚಿವ ಈಶ್ವರ ಖಂಡ್ರೆ ಸುದ್ದಿಗಾರರೊಂದಿಗೆ ಮಾತನಾಡಿದರು.
author img

By

Published : Jun 16, 2023, 6:11 PM IST

ದಾವಣಗೆರೆ: ಬಿಜೆಪಿಯವರಿಗೆ ಉದ್ಯೋಗ ಇಲ್ಲ, ಅವರು ನಿರುದ್ಯೋಗಿಗಳಾಗಿದ್ದಾರೆ. ಹೀಗಾಗಿ ಇಲ್ಲಸಲ್ಲದ ಆರೋಪಗಳನ್ನು ಮಾಡ್ತಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ವಾಗ್ದಾಳಿ ನಡೆಸಿದರು. ದಾವಣಗೆರೆಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಜಾತಿ- ಜಾತಿಗಳ ನಡುವೆ ಧರ್ಮ- ಧರ್ಮದ ನಡುವೆ ದ್ವೇಷ ಹುಟ್ಟಿಸುವ ಕೆಲಸ ಮಾಡಿದರು. ಸಮಾಜ ಒಡೆಯುವ ಕೆಲಸ ಮಾಡಿದ್ರು. ಜನರ ಭಾವನಾತ್ಮಕ ವಿಷಯಗಳನ್ನು ಕೆರಳಿಸುವ ಕೆಲಸ ಮಾಡಿ, ಜಗಳ ಹಚ್ಚಿದರು. ಅದನ್ನು ನಾವು ತಡೆಗಟ್ಟುವ ಕೆಲಸ ಮಾಡಿದ್ದೇವೆ ಎನ್ನುತ್ತಾ ಮತಾಂತರ ನಿಷೇಧ ಕಾಯ್ದೆ ರದ್ದತಿ ನಿರ್ಧಾರವನ್ನು ಖಂಡ್ರೆ ಸಮರ್ಥಿಸಿಕೊಂಡರು.

ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಬಗ್ಗೆ ಪ್ರತಿಕ್ರಿಯಿಸಿ, ವಿದ್ಯುತ್ ದರ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅವರೇ ಏರಿಕೆ ಮಾಡಿದ್ದಾರೆ. ಆಗಸ್ಟ್‌ನಿಂದ 95% ಹೆಚ್ಚು ಗ್ರಾಹಕರಿದ್ದಾರೆ. 200 ಯೂನಿಟ್ ಒಳಗೆ ಉಪಯೋಗ ಮಾಡುವವರೆಗೆ ಉಚಿತ ವಿದ್ಯುತ್ ನೀಡಲಾಗುತ್ತದೆ ಎಂದರು.

ಗ್ಯಾರಂಟಿಗಳ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಗ್ಯಾರಂಟಿ ಯೋಜನೆಗಳಿಗೆ ಕಂಡಿಷನ್ ಹಾಕಿದ್ದೇವೆ. ಆದರೆ ಅವು ರಾಜ್ಯದವರಿಗೆ ಸೌಲಭ್ಯ ಸಿಗಬೇಕು ಎಂಬ ಉದ್ದೇಶ ಹೊಂದಿದೆ. ಕೆಲವು ಗ್ಯಾರಂಟಿಗಳಿಗೆ ಮಾತ್ರ ಕಂಡಿಷನ್ ಅನ್ವಯ. ಇದರಿಂದ 90% ಜನರಿಗೆ ಲಾಭವಾಗುತ್ತದೆ ಎಂದು ಹೇಳಿದರು.

ಬಗರ್ ಹುಕುಂ ಸಾಗುವಳಿ: ಬಗರ್ ಹುಕುಂ ಸಾಗುವಳಿದಾರರ ಕೇಸ್ ಪೆಂಡಿಂಗ್ ಬಗ್ಗೆ ಮಾತನಾಡಿ, ಇದರ ಬಗ್ಗೆ ಕೃಷ್ಣ ಬೈರೇಗೌಡ್ರು ಸುತ್ತೋಲೆ ಕಳಿಸಿದ್ದಾರೆ. ಅದನ್ನು ಪರಿಶೀಲನೆ ಮಾಡಿ ಯಾರು ಬಡವರು ಇದ್ದಾರೆ ಎನ್ನುವುದನ್ನು ನೋಡಲಾಗುತ್ತದೆ. ಅವರಿಗೆ ಕಾಲಮಿತಿಯಲ್ಲಿ ಬಗರ್ ಹುಕುಂ ಸಾಗುವಳಿದಾರರ ಕೇಸ್‌ಗಳನ್ನು ಕ್ಲಿಯರ್ ಮಾಡುತ್ತೇವೆ ಎಂದರು.

ಅರಣ್ಯ ಪ್ರದೇಶಗಳಲ್ಲಿ ಒತ್ತುವರಿ ಮಾಡಿಕೊಂಡಿರುವ ದೂರುಗಳಿದ್ದು ಕಾನೂನು ಕ್ರಮ ಕೈಗೊಳ್ಳಲಾಗಿದೆ. ಆದರೆ ಚಿಕ್ಕ ಗುಡಿಸಲುಗಳನ್ನು ಕಟ್ಟಿಕೊಂಡು ಅಥವಾ ತುಂಡು ಭೂಮಿಯಲ್ಲಿ ಕೃಷಿ ಮಾಡುತ್ತಿರುವವರನ್ನು ಒಕ್ಕಲೆಬ್ಬಿಸುವ ವಿಚಾರದಲ್ಲಿ ಮಾನವೀಯತೆ ತೋರಿಸುವುದು ಅನಿವಾರ್ಯ ಎಂದು ಹೇಳಿದರು.

ಇಂದು ಶಾಮನೂರು ಶಿವಶಂಕರಪ್ಪನವರು ಹುಟ್ಟುಹಬ್ಬದ ಸಂಭ್ರದಲ್ಲಿದ್ದು ನಮ್ಮ ಹಿರಿಯ ನಾಯಕರಿಗೆ ಶುಭಾಶಯ ತಿಳಿಸಲು ಬಂದಿದ್ದೇನೆ. ಅವರ ಜೀವನದ ಆದರ್ಶಗಳನ್ನು ನಾವೆಲ್ಲರೂ ಕೈಗೂಡಿಸಿಕೊಳ್ಳಬೇಕು‌. ಹಲವಾರು ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡುತ್ತಿದ್ದಾರೆ. ಶತಾಯುಷಿಗಳಾಗಿ ಬದುಕಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದು ಆಶಿಸಿದರು.

ಇದನ್ನೂಓದಿ: ಒಣಗುತ್ತಿರುವ ಭತ್ತದ ಸಸಿ: ಸಂಕಷ್ಟದಲ್ಲಿ ಬೆಳಗಾವಿ ಅನ್ನದಾತರು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.