ದಾವಣಗೆರೆ: ಸ್ಮಾರ್ಟ್ ಸಿಟಿಯಾಗಿರುವ ದಾವಣಗೆರೆಗೆ ಸ್ಮಾರ್ಟ್ ಜನಪ್ರತಿನಿಧಿಗಳ ಅವಶ್ಯಕತೆ ಇದೆ. ಹೀಗಾಗಿ ಎಂಜಿನಿಯರಿಂಗ್ ಪದವಿ ಪಡೆದು ಹಲವು ಸಮಾಜ ಸೇವೆಗಳಲ್ಲಿ ಗುರುತಿಸಿಕೊಂಡಿರುವ 24 ನೇ ವಾರ್ಡ್ನ ಬಿಜೆಪಿ ಅಭ್ಯರ್ಥಿ ಪ್ರಸನ್ನ ಕುಮಾರ್ ಅವರನ್ನು ಗೆಲ್ಲಿಸಬೇಕು ಎಂದು ಎಂಜಿನಿಯರಿಂಗ್ ವಿದ್ಯಾರ್ಥಿಗಳ ಮುಖಂಡ ಪವನ್ ಮನವಿ ಮಾಡಿದ್ದಾರೆ.
ಈ ಕುರಿತು ದಾವಣಗೆರೆ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿದ ವಿದ್ಯಾರ್ಥಿ ಮುಖಂಡ ಪವನ್, ದಾವಣಗೆರೆಯಲ್ಲಿ ಸ್ಮಾರ್ಟ್ ಸಿಟಿ ಕೆಲಸಗಳು ನಡೆಯುತ್ತಿವೆ. ಕೆಲವೆಡೆ ಅವೈಜ್ಞಾನಿಕವಾಗಿ, ಇನ್ನೂ ಕೆಲವೆಡೆ ಕಳಪೆ ಕಾಮಗಾರಿ ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಗೆ ಉತ್ತಮ ಅಭ್ಯರ್ಥಿಗಳು ಆಯ್ಕೆಯಾಗಬೇಕಿದೆ ಎಂದರು.
ಇನ್ನು, 24ನೇ ವಾರ್ಡ್ನಲ್ಲಿ ಬಿಜೆಪಿ ಅಭ್ಯರ್ಥಿ ಪ್ರಸನ್ನ ಕುಮಾರ್ ಸ್ಪರ್ಧಿಸಿದ್ದು, ಇವರು ಎಂಜಿನಿಯರಿಂಗ್ ಪದವಿ ಪಡೆದಿದ್ದಾರೆ. ಹಲವು ಹೋರಾಟಗಳಲ್ಲಿ ಮುಂಚೂಣಿ ನಾಯಕತ್ವ ವಹಿಸಿದವರು. ನಿಸ್ವಾರ್ಥ ಸೇವೆಯಿಂದ ಗುರುತಿಸಿಕೊಂಡವರು. ಈ ರೀತಿ ನಾಯಕ ಸಿಗುವುದು ವಿರಳ. ಹಲವು ಕನಸುಗಳನ್ನು ಹೊತ್ತು ತಂದಿರುವ ಪ್ರಸನ್ನ ಅವರು ಯೋಗ್ಯ ಅಭ್ಯರ್ಥಿಯಾಗಿದ್ದಾರೆ. ಹೀಗಾಗಿ ಅವರಿಗೆ ಮತ ನೀಡುವ ಮೂಲಕ ದಾವಣಗೆರೆ ಅಭಿವೃದ್ಧಿಗೆ ಕೈ ಜೋಡಿಸಿ ಎಂದು ಪವನ ಮನವಿ ಮಾಡಿದರು.