ETV Bharat / state

ಹರಿಹರದಲ್ಲಿ ಪರಿಸರ ಜಾಗೃತಿ ಮೂಡಿಸುವ ಕೆಲಸ - ದಾವಣಗೆರೆ ಜಿಲ್ಲೆಯ ಹರಿಹರ

ವಿಶ್ವದೆಲ್ಲೆಡೆ ಜೂನ್ 5 ರಂದು ಪ್ರತಿವರ್ಷ 'ವಿಶ್ವ ಪರಿಸರ ದಿನ' ಆಚರಿಸಿಕೊಂಡು ಬರಲಾಗುತ್ತಿದೆ. ಇದು ಕೇವಲ ಒಂದು ತಿಂಗಳಿಗೆ ಸೀಮಿತವಾಗಬಾರದು ಎಂದು ಹರಿಹರದಲ್ಲಿ ಉಜ್ಜೀವನ್​ ಬ್ಯಾಂಕ್​ ವ್ಯವಸ್ಥಾಪಕ ಮೊಯಿನುದ್ದೀನ್‌ ಹೇಳಿದ್ದಾರೆ.

ffdf
ಹರಿಹರದಲ್ಲಿ ಪರಿಸರ ಜಾಗೃತಿ ಮೂಡಿಸುವ ಕೆಲಸ!
author img

By

Published : Nov 27, 2019, 8:01 PM IST

ದಾವಣಗೆರೆ: ಮಾನವ ಪರಿಸರದ ಶಿಶು. ಪರಿಸರವಿಲ್ಲದೆ ಆತನ ಅಸ್ತಿತ್ವಕ್ಕೆ ಬೆಲೆಯಿರುವುದಿಲ್ಲ. ಆದ್ದರಿಂದಲೇ ಪ್ರತಿಯೊಬ್ಬರೂ ಪರಿಸರದ ಬಗ್ಗೆ ಅರಿಯಬೇಕಾದ ಅವಶ್ಯಕತೆ ಇದೆ ಎಂದು ಉಜ್ಜೀವನ್​ ಬ್ಯಾಂಕ್​ ವ್ಯವಸ್ಥಾಪಕ ಮೊಯಿನುದ್ದೀನ್‌ ಹರಿಹರದಲ್ಲಿ ಹೇಳಿದರು.

ನಗರದಲ್ಲಿ ಉಜ್ಜೀವನ್ ಬ್ಯಾಂಕ್​ನಿಂದ ಹಮ್ಮಿಕೊಂಡಿದ್ದ ನೆರೆಹೊರೆ ಸ್ವಚ್ಛತೆ ಮತ್ತು ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪರಿಸರ ದಿನಾಚರಣೆ ಕೇವಲ ಜೂನ್ ತಿಂಗಳಿಗೆ ಮಾತ್ರ ಸೀಮಿತರಾಗದೇ ಪ್ರತಿ ದಿನವೂ ಪರಿಸರ ದಿನವನ್ನಾಗಿ ಆಚರಿಸಬೇಕು. ನಾವು ನಮ್ಮ ಪರಿಸರದ ಬಗ್ಗೆ ತಿಳಿಯುವ ಹಾಗು ಅದರ ಮಹತ್ವವನ್ನು ಅರಿಯುವ ಹಾಗೂ ಇಂದು ಪರಿಸರಕ್ಕೆ ಆಗುತ್ತಿರುವ ಹಾನಿಯನ್ನು ಅರಿತು ಸಂರಕ್ಷಣೆಯ ಬಗ್ಗೆಯೂ ಆಲೋಚಿಸಬೇಕಾಗಿದೆ ಎಂದು ಕರೆ ಕೊಟ್ಟರು.

ಹರಿಹರದಲ್ಲಿ ಪರಿಸರ ಜಾಗೃತಿ ಮೂಡಿಸುವ ಕೆಲಸ!

ಅಂತರಾಷ್ಟ್ರೀಯ ಮಟ್ಟದಲ್ಲಿ ಸ್ವಚ್ಛ ಪರಿಸರದ ಅಗತ್ಯತೆಯನ್ನು ಅರಿಯುವುದು ಹಾಗೂ ಜನರಲ್ಲಿ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿಸಬೇಕು ಎಂದು ಮೊಯಿನುದ್ದೀನ್‌ ಹೇಳಿದ್ರು. ಇನ್ನು ವಿವಿಧ ಶಾಲಾ ಮಕ್ಕಳಿಂದ ನಗರದಲ್ಲಿ ಮೆರವಣಿಗೆ ನಡೆಸಿ ಪರಿಸರದ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಲಾಯಿತು. ಈ ವೇಳೆ ಹರಿಹರದ ಪ್ರಮುಖ ನಾಯಕರು ಮುಖಂಡರು ಹಾಜರಿದ್ದರು.

Intro:ಪರಿಸರವಿಲ್ಲದೆ ಮಾನವನ ಅಸ್ತಿತ್ವಕ್ಕೆ ಬೆಲೆಯಿರುವುದಿಲ್ಲ

Intro:
ಹರಿಹರ: ಮಾನವ ಪರಿಸರದ ಶಿಶು, ಪರಿಸರವಿಲ್ಲದೆ ಮಾನವನ ಅಸ್ತಿತ್ವಕ್ಕೆ ಬೆಲೆಯಿರುವುದಿಲ್ಲ. ಆದ್ದರಿಂದಲೇ ಪ್ರತಿಯೊಬ್ಬರೂ ಪರಿಸರದ ಬಗ್ಗೆ ಅರಿಯಬೇಕಾದ ಅವಶ್ಯಕತೆ ಇದೆ ಎಂದು ಮೋಹನ್ ಉದ್ದೀನ್ ಹೇಳಿದರು.

Body:
ನಗರದಲ್ಲಿ ಉಜ್ಜೀವನ್ ಬ್ಯಾಂಕಿನಿಂದ ಹಮ್ಮಿಕೊಂಡಿದ್ದ ನೆರೆಹೊರೆ ಸ್ವಚ್ಛತೆ ಮತ್ತು ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪರಿಸರ ದಿನಾಚರಣೆ ಕೇವಲ ಜೂನ್ ತಿಂಗಳಿಗೆ ಸೀಮಿತರಾಗದೇ ಪ್ರತಿ ದಿನವೂ ಪರಿಸರ ದಿನವನ್ನಾಗಿ ಆಚರಿಸಬೇಕು. ನಾವು ನಮ್ಮ ಪರಿಸರದ ಬಗ್ಗೆ ತಿಳಿಯುವ, ಅದರ ಮಹತ್ವವನ್ನು ಅರಿಯುವ ಹಾಗೂ ಇಂದು ಪರಿಸರಕ್ಕೆ ಆಗುತ್ತಿರುವ ಹಾನಿಯನ್ನು ಅರಿತು, ಅದರ ಸಂರಕ್ಷಣೆಯ ಬಗ್ಗೆಯೂ ಆಲೋಚಿಸಬೇಕಾಗಿದೆ.
1972 ರಲ್ಲಿ ವಿಶ್ವಸಂಸ್ಥೆಯ ಘೋಷಣೆಯ ನಂತರ, 1973 ಜೂನ್ 5 ರಿಂದ ಪ್ರತಿವರ್ಷ ಈ ದಿನವನ್ನು ವಿಶ್ವ ಪರಿಸರ ದಿನವನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಇದು ಕೇವಲ ಒಂದು ತಿಂಗಳಿಗೆ ಸೀಮಿತವಾಗಬಾರದು. ಅಂತರಾಷ್ಟ್ರೀಯ ಮಟ್ಟದಲ್ಲಿ ಸ್ವಚ್ಛ ಪರಿಸರದ ಅಗತ್ಯತೆಯನ್ನು ಅರಿಯುವುದು ಹಾಗೂ ಜನರಲ್ಲಿ ಪರಿಸರ ಸಂರಕ್ಷಣೆಯ ಜಾಗೃತಿಯನ್ನು ಮೂಡಿಸಬೇಕು ಎಂದು ಹೇಳಿದರು.
ನಂತರ ಸಣ್ಣ ವೀರಯ್ಯ ಮಾತನಾಡಿ, ಪ್ರಸ್ತುತ ಜಗತ್ತಿನಲ್ಲಿ ಆಧುನಿಕತೆ, ನಗರೀಕರಣ, ಕೈಗಾರೀಕರಣ, ವಿಜ್ಞಾನ, ತಂತ್ರಜ್ಞಾನದ ಅಭಿವೃದ್ಧಿ ಎಂಬ ಹತ್ತು ಹಲವು ಕಾರಣಗಳಿಂದ ಇಂದು ಪರಿಸರಕ್ಕೆ ತೀವ್ರ ಧಕ್ಕೆಯುಂಟಾಗಿದ್ದು, ಪರಿಸರವನ್ನು ರಕ್ಷಿಸುವ, ಸಂರಕ್ಷಿಸುವ ಕರ್ತವ್ಯ ಪ್ರತಿಯೊಬ್ಬರದೂ ಆಗಿದ್ದು, ಈ ಕರ್ತವ್ಯ ನಮ್ಮ ಮುಖ್ಯ ಗುರಿಯಾಗಿರಬೇಕು ಎಂದರು.
ನಮ್ಮ ಮೇಲೆ ಪರಿಸರ ಸಂರಕ್ಷಣೆಯ ಜವಾಬ್ದಾರಿ ಹೆಚ್ಚಾಗಿಯೇ ಇದೆ. ಇಂದು ಪರಿಸರ ಮಾಲಿನ್ಯದ ಗೂಡಾಗಿದ್ದು, ನಮ್ಮ ಇರುವಿಕೆಗೆ ಅರ್ಥ ನೀಡಿದ ಪರಿಸರ ಮಾತೆಯನ್ನು ನಾವು, ನಮ್ಮ ಕಾರ್ಯಗಳಿಂದ ಕಲುಷಿತಗೊಳಿಸಿ, ಅದರ ದುಷ್ಪರಿಣಾಮಗಳನ್ನು ಈಗಾಗಲೇ ಎದುರಿಸುತ್ತಿದ್ದೇವೆ. ವಾಯು ಮಾಲಿನ್ಯ, ಜಲ ಮಾಲಿನ್ಯ, ಅಧಿಕ ಉಷ್ಣಾಂಶ, ಮಣ್ಣಿನ ಮಾಲಿನ್ಯ, ಅರಣ್ಯ ನಾಶಮಾಡುತ್ತಾ ಪರಿಸರದಲ್ಲಿ ಇಂದು ಉಂಟಾಗಿರುವ ಏರುಪೇರುಗಳು. ಈ ಏರುಪೇರುಗಳಿಗೆ ಕಾರಣ, ಅಭಿವೃದ್ಧಿ ಹೆಸರಿನಲ್ಲಿ ನಾವು ಪರಿಸರದ ಮೇಲೆ ಮಾಡಿರುವ ದೌರ್ಜನ್ಯದ ಫಲವಾಗಿದೆ ಎಂದು ಹೇಳಿದರು.
ನಂತರ ಮಾತನಾಡಿದ ರಾಜಣ್ಣ, ಪ್ರತಿಯೊಬ್ಬರಲ್ಲೂ ಪರಿಸರದ ಬಗ್ಗೆ ಜಾಗೃತಿ ಮೂಡಬೇಕು. ಕೇವಲ ವರ್ಷಕ್ಕೆ ಒಂದು ದಿನ ಪರಿಸರ ರಕ್ಷಣೆಯೆಂಬುದು ಸೀಮಿತವಾಗಬಾರದು. ವರ್ಷದ ಪ್ರತಿ ದಿನವೂ ನಮಗೆ ಪರಿಸರ ದಿನವಾಗಬೇಕು. ಏಕೆಂದರೆ ಪರಿಸರ ನಮ್ಮ ಜೀವನದ ಅವಿಭಾಜ್ಯ ಅಂಗ. ಪರಿಸರವಿಲ್ಲದೆ ಮಾನವನಿಲ್ಲ ಎಂಬ ನಿತ್ಯ ಸತ್ಯವನ್ನು ನಾವಿಂದು ನಮ್ಮ ಜೀವನದ ಗುರಿಯನ್ನಾಗಿಸಿಕೊಂಡು ಪರಿಸರ ಸಂರಕ್ಷಣೆಯತ್ತ ಮುಂದಾಗೋಣ ಎಂದು ತಿಳಿಸಿದರು.

Conclusion:
ಈ ವೇಳೆ ಮೋಹನ್ ಉದ್ದೀನ್, ರಾಜು, ರಾಜಣ್ಣ, ಸಣ್ಣ ವೀರಯ್ಯ, ಆಶಾಕಿರಣ, ನಗರಸಭಾ ಸದಸ್ಯೆ ನಿಂಬಕ್ಕಾ ಚಂದಾಪುರ್, ನಗರಸಭೆಯ ಆರೋಗ್ಯ ನಿರೀಕ್ಷರು, ಹಾಗೂ ಬ್ಯಾಂಕಿನ ಸಿಬ್ಬಂದಿಗಳು ಹಾಜರಿದ್ದರು.Body:ಪರಿಸರವಿಲ್ಲದೆ ಮಾನವನ ಅಸ್ತಿತ್ವಕ್ಕೆ ಬೆಲೆಯಿರುವುದಿಲ್ಲ

Intro:
ಹರಿಹರ: ಮಾನವ ಪರಿಸರದ ಶಿಶು, ಪರಿಸರವಿಲ್ಲದೆ ಮಾನವನ ಅಸ್ತಿತ್ವಕ್ಕೆ ಬೆಲೆಯಿರುವುದಿಲ್ಲ. ಆದ್ದರಿಂದಲೇ ಪ್ರತಿಯೊಬ್ಬರೂ ಪರಿಸರದ ಬಗ್ಗೆ ಅರಿಯಬೇಕಾದ ಅವಶ್ಯಕತೆ ಇದೆ ಎಂದು ಮೋಹನ್ ಉದ್ದೀನ್ ಹೇಳಿದರು.

Body:
ನಗರದಲ್ಲಿ ಉಜ್ಜೀವನ್ ಬ್ಯಾಂಕಿನಿಂದ ಹಮ್ಮಿಕೊಂಡಿದ್ದ ನೆರೆಹೊರೆ ಸ್ವಚ್ಛತೆ ಮತ್ತು ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪರಿಸರ ದಿನಾಚರಣೆ ಕೇವಲ ಜೂನ್ ತಿಂಗಳಿಗೆ ಸೀಮಿತರಾಗದೇ ಪ್ರತಿ ದಿನವೂ ಪರಿಸರ ದಿನವನ್ನಾಗಿ ಆಚರಿಸಬೇಕು. ನಾವು ನಮ್ಮ ಪರಿಸರದ ಬಗ್ಗೆ ತಿಳಿಯುವ, ಅದರ ಮಹತ್ವವನ್ನು ಅರಿಯುವ ಹಾಗೂ ಇಂದು ಪರಿಸರಕ್ಕೆ ಆಗುತ್ತಿರುವ ಹಾನಿಯನ್ನು ಅರಿತು, ಅದರ ಸಂರಕ್ಷಣೆಯ ಬಗ್ಗೆಯೂ ಆಲೋಚಿಸಬೇಕಾಗಿದೆ.
1972 ರಲ್ಲಿ ವಿಶ್ವಸಂಸ್ಥೆಯ ಘೋಷಣೆಯ ನಂತರ, 1973 ಜೂನ್ 5 ರಿಂದ ಪ್ರತಿವರ್ಷ ಈ ದಿನವನ್ನು ವಿಶ್ವ ಪರಿಸರ ದಿನವನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಇದು ಕೇವಲ ಒಂದು ತಿಂಗಳಿಗೆ ಸೀಮಿತವಾಗಬಾರದು. ಅಂತರಾಷ್ಟ್ರೀಯ ಮಟ್ಟದಲ್ಲಿ ಸ್ವಚ್ಛ ಪರಿಸರದ ಅಗತ್ಯತೆಯನ್ನು ಅರಿಯುವುದು ಹಾಗೂ ಜನರಲ್ಲಿ ಪರಿಸರ ಸಂರಕ್ಷಣೆಯ ಜಾಗೃತಿಯನ್ನು ಮೂಡಿಸಬೇಕು ಎಂದು ಹೇಳಿದರು.
ನಂತರ ಸಣ್ಣ ವೀರಯ್ಯ ಮಾತನಾಡಿ, ಪ್ರಸ್ತುತ ಜಗತ್ತಿನಲ್ಲಿ ಆಧುನಿಕತೆ, ನಗರೀಕರಣ, ಕೈಗಾರೀಕರಣ, ವಿಜ್ಞಾನ, ತಂತ್ರಜ್ಞಾನದ ಅಭಿವೃದ್ಧಿ ಎಂಬ ಹತ್ತು ಹಲವು ಕಾರಣಗಳಿಂದ ಇಂದು ಪರಿಸರಕ್ಕೆ ತೀವ್ರ ಧಕ್ಕೆಯುಂಟಾಗಿದ್ದು, ಪರಿಸರವನ್ನು ರಕ್ಷಿಸುವ, ಸಂರಕ್ಷಿಸುವ ಕರ್ತವ್ಯ ಪ್ರತಿಯೊಬ್ಬರದೂ ಆಗಿದ್ದು, ಈ ಕರ್ತವ್ಯ ನಮ್ಮ ಮುಖ್ಯ ಗುರಿಯಾಗಿರಬೇಕು ಎಂದರು.
ನಮ್ಮ ಮೇಲೆ ಪರಿಸರ ಸಂರಕ್ಷಣೆಯ ಜವಾಬ್ದಾರಿ ಹೆಚ್ಚಾಗಿಯೇ ಇದೆ. ಇಂದು ಪರಿಸರ ಮಾಲಿನ್ಯದ ಗೂಡಾಗಿದ್ದು, ನಮ್ಮ ಇರುವಿಕೆಗೆ ಅರ್ಥ ನೀಡಿದ ಪರಿಸರ ಮಾತೆಯನ್ನು ನಾವು, ನಮ್ಮ ಕಾರ್ಯಗಳಿಂದ ಕಲುಷಿತಗೊಳಿಸಿ, ಅದರ ದುಷ್ಪರಿಣಾಮಗಳನ್ನು ಈಗಾಗಲೇ ಎದುರಿಸುತ್ತಿದ್ದೇವೆ. ವಾಯು ಮಾಲಿನ್ಯ, ಜಲ ಮಾಲಿನ್ಯ, ಅಧಿಕ ಉಷ್ಣಾಂಶ, ಮಣ್ಣಿನ ಮಾಲಿನ್ಯ, ಅರಣ್ಯ ನಾಶಮಾಡುತ್ತಾ ಪರಿಸರದಲ್ಲಿ ಇಂದು ಉಂಟಾಗಿರುವ ಏರುಪೇರುಗಳು. ಈ ಏರುಪೇರುಗಳಿಗೆ ಕಾರಣ, ಅಭಿವೃದ್ಧಿ ಹೆಸರಿನಲ್ಲಿ ನಾವು ಪರಿಸರದ ಮೇಲೆ ಮಾಡಿರುವ ದೌರ್ಜನ್ಯದ ಫಲವಾಗಿದೆ ಎಂದು ಹೇಳಿದರು.
ನಂತರ ಮಾತನಾಡಿದ ರಾಜಣ್ಣ, ಪ್ರತಿಯೊಬ್ಬರಲ್ಲೂ ಪರಿಸರದ ಬಗ್ಗೆ ಜಾಗೃತಿ ಮೂಡಬೇಕು. ಕೇವಲ ವರ್ಷಕ್ಕೆ ಒಂದು ದಿನ ಪರಿಸರ ರಕ್ಷಣೆಯೆಂಬುದು ಸೀಮಿತವಾಗಬಾರದು. ವರ್ಷದ ಪ್ರತಿ ದಿನವೂ ನಮಗೆ ಪರಿಸರ ದಿನವಾಗಬೇಕು. ಏಕೆಂದರೆ ಪರಿಸರ ನಮ್ಮ ಜೀವನದ ಅವಿಭಾಜ್ಯ ಅಂಗ. ಪರಿಸರವಿಲ್ಲದೆ ಮಾನವನಿಲ್ಲ ಎಂಬ ನಿತ್ಯ ಸತ್ಯವನ್ನು ನಾವಿಂದು ನಮ್ಮ ಜೀವನದ ಗುರಿಯನ್ನಾಗಿಸಿಕೊಂಡು ಪರಿಸರ ಸಂರಕ್ಷಣೆಯತ್ತ ಮುಂದಾಗೋಣ ಎಂದು ತಿಳಿಸಿದರು.

Conclusion:
ಈ ವೇಳೆ ಮೋಹನ್ ಉದ್ದೀನ್, ರಾಜು, ರಾಜಣ್ಣ, ಸಣ್ಣ ವೀರಯ್ಯ, ಆಶಾಕಿರಣ, ನಗರಸಭಾ ಸದಸ್ಯೆ ನಿಂಬಕ್ಕಾ ಚಂದಾಪುರ್, ನಗರಸಭೆಯ ಆರೋಗ್ಯ ನಿರೀಕ್ಷರು, ಹಾಗೂ ಬ್ಯಾಂಕಿನ ಸಿಬ್ಬಂದಿಗಳು ಹಾಜರಿದ್ದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.