ETV Bharat / state

'ನ್ಯಾಯ ಸಿಗದಿದ್ದರೆ ನೇಣಿಗೆ ಶರಣಾಗುವೆ..' ಸಾಲು ಮರದ ವೀರಾಚಾರಿ ಆತ್ಮಹತ್ಯೆ

ರಾಜ್ಯ ಪ್ರಶಸ್ತಿ ವಿಜೇತ ಸಾಲು ಮರದ ವೀರಾಚಾರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Environmental Lover  Mitlakatte Veerachari
ಪರಿಸರ ಪ್ರೇಮಿ ಮಿಟ್ಲಕಟ್ಟೆ ವೀರಾಚಾರಿ
author img

By

Published : Sep 20, 2022, 8:38 AM IST

Updated : Sep 20, 2022, 8:52 AM IST

ದಾವಣಗೆರೆ: ಪರಿಸರ ಪ್ರೇಮಿ, ಸಾಲು ಮರದ ವೀರಾಚಾರಿ ಎಂದೇ ಖ್ಯಾತಿ ಪಡೆದಿದ್ದ ರಾಜ್ಯ ಪ್ರಶಸ್ತಿ ವಿಜೇತ ಮಿಟ್ಲಕಟ್ಟೆ ವೀರಾಚಾರಿ ಅವರು ಕಳೆದ ಮಧ್ಯರಾತ್ರಿ ಮರಕ್ಕೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ದಾವಣಗೆರೆ ತಾಲೂಕಿನ ಮಿಟ್ಲಕಟ್ಟೆ ಗ್ರಾಮದಲ್ಲಿ ಘಟನೆ ನಡೆದಿದೆ.

ಸಾಲು ಮರಗಳನ್ನು ಬೆಳೆಸಿ ಪೋಷಿಸಿದ್ದ ಪರಿಸರ ಪ್ರೇಮಿಗೆ ಈ ಹಿಂದೆ ರಾಜ್ಯ ಸರ್ಕಾರ ರಾಜೋತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು. ಇತ್ತೀಚೆಗೆ ಇವರು ಮಿಟ್ಲಕಟ್ಟೆ ಗ್ರಾಮದಲ್ಲಿ ನ್ಯಾಯಬೆಲೆ ಅಂಗಡಿ ಅಕ್ರಮದ ವಿರುದ್ಧ ಹೋರಾಟ ಮಾಡುತ್ತಿದ್ದರು. ನ್ಯಾಯಬೆಲೆ ಅಂಗಡಿಯಲ್ಲಿ ಬಡವರಿಗೆ ಸೂಕ್ತವಾಗಿ ಅಕ್ಕಿ ವಿತರಣೆಯಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದರು. ನಿನ್ನೆ(ಸೋಮವಾರ) ಇದೇ ವಿಚಾರವಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನ್ಯಾಯ ಬೆಲೆ ಅಂಗಡಿ ರದ್ದು ಮಾಡಬೇಕೇ, ಬೇಡವೇ? ಎಂಬ ಬಗ್ಗೆ ಚರ್ಚೆ ನಡೆದಿತ್ತು.

Environmental Lover  Mitlakatte Veerachari
ಪರಿಸರ ಪ್ರೇಮಿ ಮಿಟ್ಲಕಟ್ಟೆ ವೀರಾಚಾರಿ

3,000ಕ್ಕೂ ಹೆಚ್ಚು ಮರಗಳನ್ನು ಬೆಳೆಸಿದ ವೀರಾಚಾರಿ: ಇತ್ತೀಚೆಗಿನ ಘಟನಾವಳಿಗಳಿಂದ ತೀವ್ರವಾಗಿ ಮನನೊಂದಿದ್ದ ವೀರಾಚಾರಿ ನ್ಯಾಯಾಲಯ, ಜನರು ಮತ್ತು ದೇವರಲ್ಲಿಯೂ ನ್ಯಾಯ ಸಿಗದಿದ್ದರೆ ನೇಣಿಗೆ ಶರಣಾಗುವೆ ಎಂದು ಹೇಳಿದ್ದರು. ಅದರಂತೆಯೇ ನಿನ್ನೆ ರಾತ್ರಿ 2 ಗಂಟೆಗೆ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. 3,000ಕ್ಕೂ ಹೆಚ್ಚು ಮರಗಳನ್ನು ಬೆಳೆಸಿದ ವೀರಾಚಾರಿ ದಾವಣಗೆರೆ ಜಿಲ್ಲೆಯಲ್ಲಿ ಚಿರಪರಿಚಿತರು.

ಇದನ್ನೂ ಓದಿ: ಸಾಲು ಮರದ ತಿಮ್ಮಕ್ಕನಂತೆ 3 ಸಾವಿರ ಮರ ನೆಟ್ಟ ವೀರಾಚಾರಿ..

Last Updated : Sep 20, 2022, 8:52 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.