ದಾವಣಗೆರೆ: ಇಂದು ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಹತ್ತರ ವಿಷಯಗಳನ್ನು ಚರ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಹಿಂದುಳಿದ ವರ್ಗಗಳ ಜಾತಿ ಪುನಸ್ಕರಣೆ ಕುರಿತು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಆದೇಶ ಹೊರಡಿಸಿದ್ದರ ಬಗ್ಗೆ ಸಭೆಯಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ ಎಂದರು.
ವಿಧಾನಸಭೆ ಅಧಿವೇಶನ ಮುಕ್ತಾಯದ ಬಳಿಕ ರಾಜ್ಯಾದ್ಯಂತ ಪ್ರವಾಸ ಮಾಡಲು ಚಿಂತನೆ ನಡೆಸಿದ್ದೇವೆ. ಆಡಳಿತಕ್ಕೆ ಚುರುಕು ನೀಡುವುದರ ಬಗೆಗೂ ಸಿಎಂ ಮಾತನಾಡಿದರು.
ಈವರೆಗೆ ಕೋವಿಡ್ ಕಾರಣದಿಂದ ಪೂರ್ಣ ಪ್ರಮಾಣದ ಸಭೆ ನಡೆದಿರಲಿಲ್ಲ. ಅಕ್ಟೋಬರ್ನಲ್ಲಿ ನಾಲ್ಕು ಕಡೆ ಬೃಹತ್ ಸಮಾವೇಶ ಮಾಡಲಿದ್ದೇವೆ ಎಂದರು. ಜೊತೆಗೆ, ಯಡಿಯೂರಪ್ಪ ನೇತೃತ್ವದಲ್ಲಿ ಕೋವಿಡ್ ನಿರ್ವಹಣೆ ಹಾಗೂ ಅಭಿವೃದ್ಧಿ ಕಾರ್ಯ ಆಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾಂಗ್ರೆಸ್ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ಇವರು ಪ್ರತಿಭಟನೆ ಮಾಡಲು ಸಿದ್ದರಾಮಯ್ಯ ಸರ್ಕಾರ ಇದ್ದಿದ್ದರೆ ಎತ್ತುಗಳೇ ಇರುತ್ತಿರಲಿಲ್ಲ. ಅವುಗಳನ್ನು ಉಳಿಸಿದವರು ಬಿಎಸ್ವೈ ಹಾಗೂ ಬೊಮ್ಮಾಯಿ ಎಂದರು.
ಹಿಂದೂ ಸಮಾಜದ ಬಗ್ಗೆ ಮಾತನಾಡುವ ನೈತಿಕತೆ ಸಿದ್ದರಾಮಯ್ಯಗೆ ಇಲ್ಲ. ಮುಂದಿನ ದಿನಗಳಲ್ಲಿ ಯಾವುದೇ ಹಿಂದೂ ದೇವಾಲಯಕ್ಕೆ ಹಾನಿಯಾಗಲು ಬಿಡುವುದಿಲ್ಲ. ಯಾವುದೇ ಅಧಿಕಾರಿಗಳು ತಪ್ಪು ಮಾಡಿದ್ದಾರೋ ಅವರಿಗೆ ತಕ್ಕ ಶಿಕ್ಷೆಯಾಗುತ್ತದೆ ಎಂದು ಸಿಎಂ ಎಚ್ಚರಿಕೆ ನೀಡಿದರು.
ಇದನ್ನೂ ಓದಿ: ಹಿಂದೂಗಳ ಭಾವನೆಗೆ ಧಕ್ಕೆ ಬಾರದಂತೆ ಕಾನೂನು ತರುತ್ತೇವೆ: ಆರ್.ಅಶೋಕ್