ದಾವಣಗೆರೆ: ಔಷಧ ಉಗ್ರಾಣದಲ್ಲಿ ಅವಧಿ ಮೀರಿದ ಔಷಧಿಗಳನ್ನು ನಿಯಮಾನುಸಾರ ವಿಲೇವಾರಿ ಮಾಡದೇ ದಾಸ್ತಾನು ಇಟ್ಟಿದ್ದಕ್ಕೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ಉಗ್ರಾಣಕ್ಕೆ ಭೇಟಿ ನೀಡಿದಾಗ ಅವ್ಯವಸ್ಥೆ ಕಂಡು ಡಿಸಿ ಗರಂ ಆದರು. ಔಷಧ ಉಗ್ರಾಣದ ಪ್ರಭಾರ ವಹಿಸಿಕೊಂಡಿರುವ ಕೊಟ್ರೇಶ್ ಬಣಕಾರ್ಗೆ ಸಂಬಂಧಪಟ್ಟ ಸಂಸ್ಥೆಯಿಂದ ಅವಧಿ ಮೀರಿದ ಔಷಧಿಗಳನ್ನು ನಿಯಾಮಾನುಸಾರ ವಿಲೇವಾರಿ ಮಾಡುವಂತೆ ಸೂಚಿಸಿದರು.
ಇನ್ನು ಮುಂದೆ ಈ ರೀತಿಯ ಲೋಪಗಳು ಕಂಡು ಬಂದಲ್ಲಿ ಸಂಬಂಧಪಟ್ಟ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿ ಮೇಲೆ ಕ್ರಮ ಕೈಗೊಳ್ಳುವುದಾಗಿ ಡಿಸಿ ಎಚ್ಚರಿಕೆ ನೀಡಿದ್ದಾರೆ.