ದಾವಣಗೆರೆ: ಸಾಲಬಾಧೆಗೆ ಬೇಸತ್ತು ರೈತ ನೇಣಿಗೆ ಶರಣಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಭಾನುವಳ್ಳಿ ಗ್ರಾಮದಲ್ಲಿ ನಡೆದಿದೆ.

ಮಲ್ಲಪ್ಪ ರೆಡ್ಡಿ (45) ಸಾವಿಗೆ ಶರಣಾದ ರೈತ
ರಾಷ್ಟ್ರೀಕೃತ ಬ್ಯಾಂಕ್, ಸಹಕಾರ ಸಂಘ ಹಾಗೂ ಖಾಸಗಿಯಾಗಿ 6 ಲಕ್ಷ ರೂಪಾಯಿಗೂ ಹೆಚ್ಚು ಸಾಲ ಮಾಡಿದ್ದ ಎನ್ನಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಲ್ಲಪ್ಪ ರೆಡ್ಡಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಮಲೇಬೆನ್ನೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.