ದಾವಣಗೆರೆ: ಸಾಲಬಾಧೆಯಿಂದ ಕಂಗಾಲಾಗಿದ್ದ ರೈತನೋರ್ವ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಹೆಚ್.ಗೋಪಗೊಂಡನಹಳ್ಳಿಯಲ್ಲಿ ನಡೆದಿದೆ.
ಹಾಲೇಶಪ್ಪ(50) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ರೈತ. ಹಾಲೇಶಪ್ಪರಿಗೆ ಎರಡೂವರೆ ಎಕರೆ ಜಮೀನಿದ್ದು, ಕೈಗಡವಾಗಿ ಐದು ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಸರಿಯಾಗಿ ಮಳೆಯಾಗದೇ ಬೆಳೆ ಕೈಕೊಟ್ಟ ಹಿನ್ನೆಲೆ ನೇಣಿಗೆ ಶರಣಾಗಿದ್ದಾನೆ.
ಮೃತ ಹಾಲೇಶಪ್ಪನಿಗೆ ಐದು ಜನ ಮಕ್ಕಳಿದ್ದು, ತಂದೆಯ ಅಗಲಿಕೆಯಿಂದ ದಿಕ್ಕು ತೋಚದಂತಾಗಿದ್ದಾರೆ. ಸ್ಥಳಕ್ಕೆ ಶಾಸಕ ಎಂ ಪಿ ರೇಣುಕಾಚಾರ್ಯ ಭೇಟಿ ನೀಡಿ, ಮೃತನ ಕುಟುಂಬಕ್ಕೆ ಸಾಂತ್ವನ ಹೇಳಿದರು.