ದಾವಣಗೆರೆ : ಕಬ್ಬು ಬೆಳೆಗಾರರಿಗಾಗಿಯೇ ಜಾರಿಗೆ ತಂದಿರುವ ಎಫ್ ಆರ್ ಪಿ( ನ್ಯಾಯಯುತ ಲಾಭದಾಯಕ ಬೆಲೆ)ಯಿಂದ ರೈತರಿಗೆ ಯಾವುದೇ ಲಾಭ ಆಗುತ್ತಿಲ್ಲ ಎಂದು ಆರೋಪಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಉಪಾಧ್ಯಕ್ಷ ತೇಜಸ್ವಿ ಪಟೇಲ್ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಮಾಯಿಸಿದ ಕಬ್ಬು ಬೆಳೆಗಾರರು ದಾವಣಗೆರೆ ರಾಷ್ಟ್ರೀಯ ಹೆದ್ದಾರಿ 46ರಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಈ ವೇಳೆ, ಪ್ರತಿಭಟನಾಕಾರರು ರಸ್ತೆಯಲ್ಲೇ ಕುಳಿತು ಶೇಂಗಾ ತಿನ್ನುವ ಮತ್ತು ರಕ್ತದಾನ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ವಿಭಿನ್ನವಾಗಿ ಪ್ರತಿಭಟಿಸಿದರು. ಈ ವೇಳೆ, ಕಬ್ಬು ಬೆಳೆಗೆ ನ್ಯಾಯಯುತ ಎಫ್ ಆರ್ ಪಿ ನೀಡುವಂತೆ ಒತ್ತಾಯಿಸಲಾಯಿತು.
ಹೆದ್ದಾರಿ ತಡೆಯಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇನ್ನು ಪ್ರತಿಭಟನೆ ವೇಳೆ ರಕ್ತದಾನ ಮಾಡುವ ವಿಚಾರದಲ್ಲಿ ಪೊಲೀಸರ ಹಾಗೂ ರೈತರ ನಡುವೆ ವಾಗ್ವಾದ ನಡೆಯಿತು. ಬಳಿಕ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಶಿವಾನಂದ್ ಕಪಾಶಿಯವರಿಗೆ ರೈತರು ಮನವಿ ಸಲ್ಲಿಸಿದರು.
ಇದನ್ನೂ ಓದಿ : ಮೈಸೂರು ದಸರಾ: ಅರಮನೆಯೊಳಗೆ ತಾಲೀಮು ನಡೆಸಿದ ಗಜಪಡೆ