ದಾವಣಗೆರೆ: ಮುಂಗಾರು ಮಳೆ ಆರಂಭವಾದರೂ ರೈತರಿಗೆ ರಸಗೊಬ್ಬರ ಸಿಗ್ತಿಲ್ಲ ಎಂಬ ದೂರುಗಳು ಕೇಳಿಬಂದಿವೆ. ಇದರಿಂದ ಕೆರಳಿದ ರೈತರು ಶಾಸಕರ ಸಮ್ಮುಖದಲ್ಲೇ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ಹೊನ್ನಾಳಿಯಲ್ಲಿ ನಡೆಯಿತು.
ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕುಗಳಲ್ಲಿ ಕೃತಕ ರಸಗೊಬ್ಬರ ಅಭಾವ ಸೃಷ್ಟಿಸಲಾಗಿದೆ. ಇದರ ಬೆನ್ನಲ್ಲೇ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರಿಂದು ರಸಗೊಬ್ಬರ ವರ್ತಕರು ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಸಭೆಯನ್ನು ಹೊನ್ನಾಳಿ ತಾಲೂಕು ಸಾಮರ್ಥ್ಯ ಸೌಧದಲ್ಲಿ ನಡೆಸಿದರು.
ಇದೇ ವೇಳೆ ಸಭೆಗೆ ಪ್ರವೇಶಿಸಿದ ಉಭಯ ತಾಲೂಕುಗಳ ರೈತರು ಶಾಸಕರ ಸಮ್ಮುಖದಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಶಾಸಕ ರೇಣುಕಚಾರ್ಯ ಮಧ್ಯೆ ಪ್ರವೇಶಿಸಿ, ರೈತ ಬಂಧುಗಳಿಗೆ ವಂಚಿಸಿ ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ ಮಾಡಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಸೂಚಿಸಿದರು.
ರಸಗೊಬ್ಬರ ಅಭಾವ ಸೃಷ್ಟಿಯಾಗದಂತೆಯೂ ಕ್ರಮವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಅವರು, ರೈತರಿಗೆ ಸರ್ಕಾರ ನಿಗದಿ ಮಾಡಿರುವ ಬೆಲೆಗೆ ರಸಗೊಬ್ಬರ ನೀಡಬೇಕೆಂದು ತಾಕೀತು ಮಾಡಿದರು.
ಇದನ್ನೂ ಓದಿ: ಕೊಪ್ಪಳ: ಮಾರಾಮಾರಿಗೆ ಕಾರಣವಾದ ಯುವಕ-ಯುವತಿಯ ಪ್ರೇಮ ಪ್ರಕರಣ