ದಾವಣಗೆರೆ: ಕರ್ನಾಟಕ ರಾಜಕೀಯ ಪರಿಸ್ಥಿತಿ ಡೋಲಾಯಮಾನವಾಗಿದೆ. ಇತ್ತ ಶಾಸಕರು ರೆಸಾರ್ಟ್ ಕಡೆ ಮುಖ ಮಾಡಿದ್ದು, ಕ್ಷೇತ್ರಗಳ ಅಭಿವೃದ್ಧಿ ಕೆಲಸಗಳು ಕುಂಠಿತಗೊಂಡಿವೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಅತೃಪ್ತ ಶಾಸಕರ ಭಾವಚಿತ್ರಗಳಿಗೆ ಎಲೆ ಅಡಿಕೆ ಹಾಕಿಕೊಂಡು ಛೀ ಥೂ ಎಂದು ಉಗಿಯುವ ಮೂಲಕ ಆಕ್ರೋಶ ವ್ಯಕ್ತಪಡಿಸಿವೆ.
ಹೌದು, ದಾವಣಗೆರೆ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗ ಪ್ರತಿಭಟನೆ ನಡೆಸಿದ ಸಂಘಟನೆ ಸದಸ್ಯರು, ಅತೃಪ್ತ ಶಾಸಕರ ಭಾವಚಿತ್ರಗಳಿಗೆ ಛೀ ಥೂ ಎಂದು ಉಗಿದು ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕದಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಯಾವುದೇ ಶಿಸ್ತು ಬದ್ಧತೆಯಿಲ್ಲದೆ ವಿಧಾನಸಭೆಯಲ್ಲಿ ಗಲಭೆ ಎಬ್ಬಿಸುತ್ತಿವೆ. ಮತದಾರರ ಆಶಯಗಳನ್ನು ಗಾಳಿಗೆ ತೂರಿ ಆಸೆ ಆಮಿಷಗಳಿಗೆ ಒಳಗಾಗಿ ರಾಜ್ಯ ಅಭಿವೃದ್ಧಿ ನಿರ್ಲಕ್ಷಿಸಿದ್ದಾರೆ. ಹಾಗಾಗಿ ಈ ಸರ್ಕಾರವನ್ನು ವಿಸರ್ಜನೆಗೊಳಿಸಿ ಮತ್ತೆ ಚುನಾವಣೆ ನಡೆಸಬೇಕೆಂದು ಒತ್ತಾಯಿಸಿದರು.