ETV Bharat / state

ಶಾಸಕ ರಾಮಪ್ಪ ಪುತ್ರಿ ವಿವಾಹದಲ್ಲಿ ಕೋವಿಡ್ ನಿಯಮ ಮಾಯ: ಎಫ್ಐಆರ್ ದಾಖಲು - FIR Registered against MLA Ramappa for violating corona rules

ಈ ಹಿಂದೆ ಕೋವಿಡ್​ ಕೇರ್​ ಸೆಂಟರ್​ನಲ್ಲಿ ಹೋಮ ಮಾಡಿ ಚರ್ಚೆಗೆ ಗ್ರಾಸವಾಗಿದ್ದ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ವಿರುದ್ದ ಜಿಲ್ಲಾಡಳಿತ ಕ್ರಮಕ್ಕೆ ಮುಂದಾಗದೇ, ಕಾಂಗ್ರೆಸ್ ಶಾಸಕ ಎಸ್. ರಾಮಪ್ಪನವರ ವಿರುದ್ಧ ಕ್ರಮ ಜರುಗಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

mla-ramappa
ಶಾಸಕ ರಾಮಪ್ಪ
author img

By

Published : Jul 6, 2021, 8:46 PM IST

ದಾವಣಗೆರೆ: ಪುತ್ರಿಯ ವಿವಾಹ ಕಾರ್ಯಕ್ರಮದಲ್ಲಿ ಕೊರೊನಾ ನಿಯಮ ಉಲ್ಲಂಘಿಸಿದ ಆರೋಪದ ಮೇರೆಗೆ ಕಾಂಗ್ರೆಸ್ ಶಾಸಕ ರಾಮಪ್ಪ ಹಾಗೂ ಪುತ್ರ ಯತಿರಾಜ್​ ಅವರ ಮೇಲೆ ಎಫ್​ಐಆರ್​ ದಾಖಲಿಸಲಾಗಿದೆ.

ಇದೇ ತಿಂಗಳ 2 ರಂದು ಹರಿಹರದ ಸಿದ್ದೇಶ್ವರ ಪ್ಯಾಲೇಸ್​ನಲ್ಲಿ ಶಾಸಕ ಎಸ್.ರಾಮಪ್ಪ ಅವರ ಪುತ್ರಿಯ ವಿವಾಹ ಜರುಗಿತ್ತು. ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಬರುತ್ತಿದ್ದಂತೆ ಜನಜಂಗುಳಿಯಾಗಿ ಕೊರೊನಾ ನಿಯಮ ಉಲ್ಲಂಘನೆಯಾಗಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿಯವರು ತಹಶೀಲ್ದಾರ್​, ಸಿಪಿಐ, ನಗರಸಭೆ ಆಯುಕ್ತರಿಗೆ ಡಿಸಿಯಿಂದ ನೋಟೀಸ್ ನೀಡಿ ಮಾಹಿತಿ ಕೇಳಿದ್ದರು.

ಕಾಂಗ್ರೆಸ್ ಶಾಸಕ ಎಸ್. ರಾಮಪ್ಪ

ಹರಿಹರದ ಅಧಿಕಾರಿಗಳು ನೋಟಿಸ್ ಅ​ನ್ನು ಪರಿಗಣಿಸಿ ನಗರ ಠಾಣೆಯಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ ಅನ್ವಯ, ನಂ.114\2021 ಕಲಂ 269 ಮತ್ತು 5\1 ಸೆಕ್ಷನ್ ಅನ್ವಯ ದೂರು ದಾಖಲಿಸಿದ್ದಾರೆ.

ಈ ಹಿಂದೆ ಕೋವಿಡ್​ ಕೇರ್​ ಸೆಂಟರ್​ನಲ್ಲಿ ಹೋಮ ಮಾಡಿ ಚರ್ಚೆಗೆ ಗ್ರಾಸವಾಗಿದ್ದ ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ವಿರುದ್ದ ಜಿಲ್ಲಾಡಳಿತ ಕ್ರಮಕ್ಕೆ ಮುಂದಾಗದೇ, ಕಾಂಗ್ರೆಸ್ ಶಾಸಕ ಎಸ್. ರಾಮಪ್ಪನವರ ವಿರುದ್ಧ ಕ್ರಮ ಜರುಗಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

FIR
ಎಫ್​ಐಆರ್​ ಪ್ರತಿ

ಇದನ್ನೂ ಓದಿ: 'ಮುಂದಿನ ಚುನಾವಣೆಯನ್ನೂ ಯಡಿಯೂರಪ್ಪ ನೇತೃತ್ವದಲ್ಲಿಯೇ ಎದುರಿಸುತ್ತೇವೆ'

ETV Bharat Logo

Copyright © 2025 Ushodaya Enterprises Pvt. Ltd., All Rights Reserved.