ದಾವಣಗೆರೆ: ನಗರದ ಹೀರೋ ರುತ್ವೀ ಬೈಕ್ ಶೋ ರೂಮ್ಗೆ ಆಕಸ್ಮಿಕ ಬೆಂಕಿ ತಗುಲಿದ್ದು, ಅಗ್ನಿಶಾಮಕ ದಳದ ಕಾರ್ಯಾಚರಣೆಯಿಂದ ಭಾರೀ ಅನಾಹುತ ತಪ್ಪಿದೆ.
ಬೆಂಕಿ ಕಾಣಿಸಿಕೊಂಡ ಕೇವಲ ಹತ್ತೇ ನಿಮಿಷದಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿ ಮೂರು ವಾಹನಗಳೊಂದಿಗೆ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶೋ ರೂಮ್ನ ಇದೇ ಕಟ್ಟಡದಲ್ಲಿ ರೆಸಿಪಿ ರೆಸ್ಟೋರೆಂಟ್ ಕೂಡ ಇತ್ತು. ಆದ್ರೆ ಬೆಂಕಿಯ ಕೆನ್ನಾಲಿಗೆ ವ್ಯಾಪಿಸದಂತೆ ಸ್ಥಳೀಯರು ಅಗ್ನಿಶಾಮಕ ದಳದೊಂದಿಗೆ ಸೇರಿ ಭಾರೀ ಅನಾಹುತ ಸಂಭವಿಸುವುದನ್ನು ತಪ್ಪಿಸಿದ್ದಾರೆ.
ಜನರೇಟರ್ ಇದ್ದ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಒಂದು ಬೈಕ್ ಸಹ ಬೆಂಕಿಗೆ ಆಹುತಿಯಾಗಿಲ್ಲ ಎಂದು ಅಗ್ನಿಶಾಮಕ ದಳದ ಜಿಲ್ಲಾಧಿಕಾರಿ ಬಸವಪ್ರಭು ಶರ್ಮಾ ತಿಳಿಸಿದ್ದಾರೆ.