ದಾವಣಗೆರೆ: ಕೋವಿಡ್ನಿಂದ ಗುಣಮುಖರಾದವರಲ್ಲಿ ಕಾಣಿಸಿಕೊಳ್ಳುವ ಹೊಸ ರೋಗ ಮಿಸ್-ಸಿ ( MIS-C) ಗೆ ಜಿಲ್ಲೆಯಲ್ಲಿ ಮೊದಲ ಸಾವು ಸಂಭವಿಸಿದೆ. ನಗರದ ಎಸ್. ಎಸ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 5 ವರ್ಷದ ಹೆಣ್ಣು ಮಗು ಹೊಸ ಸೋಂಕಿಯಿಂದ ಕೊನೆಯುಸಿರೆಳೆದಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮಾಹಿತಿ ನೀಡಿದ್ದಾರೆ.
ಮಿಸ್-ಸಿ ಸೋಂಕು ಪತ್ತೆಯಾದ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ಚಿತ್ರದುರ್ಗದಿಂದ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಗೆ ಕರೆತರಲಾಗಿತ್ತು.
ಓದಿ : ಶಾಕಿಂಗ್: ಬಳ್ಳಾರಿ, ವಿಜಯನಗರದ 35 ಮಕ್ಕಳಲ್ಲಿ MIS- C, ANEC ಹೊಸ ರೋಗಗಳು ಪತ್ತೆ!
ಇಂದು (ಶನಿವಾರ) ಮುಂಜಾನೆ 3 ಗಂಟೆಗೆ ಚಿಕಿತ್ಸೆ ಫಲಿಸದೆ ಮಗು ಮೃತಪಟ್ಟಿದೆ. ಕಳೆದ ಒಂದು ವರ್ಷದಲ್ಲಿ ಹತ್ತು ಮಿಸ್-ಸಿ ಪ್ರಕರಣಗಳು ದಾವಣಗೆರೆ ಜಿಲ್ಲೆಯಲ್ಲಿ ದಾಖಲಾಗಿವೆ. ಈ ಪೈಕಿ ಸದ್ಯ, ಎರಡು ಸಕ್ರಿಯ ಪ್ರಕರಣಗಳಿವೆ. ಸೋಂಕಿತರಿಗೆ ಚಿಕಿತ್ಸೆ ನೀಡಲಾಗ್ತಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.