ETV Bharat / state

ಕಟ್ಟಡ ಕಾರ್ಮಿಕರಿಗೂ ಆಹಾರದ ಕಿಟ್ ಕೊಡಿ:  ಚಂದ್ರಶೇಖರ್ ಆಗ್ರಹ - ಕಟ್ಟಡ ಕಾರ್ಮಿಕರಿಗೂ ಆಹಾರ ಸಾಮಗ್ರಿಗಳ ಕಿಟ್ ವಿತರಿಸಿ

ಆಹಾರ ಸಾಮಗ್ರಿ ವಿತರಣೆಯಲ್ಲಿ‌ ತಾರತಮ್ಯ ನೀತಿ ಅನುಸರಿಸಲಾಗುತ್ತಿದ್ದು, ಸಮರ್ಪಕವಾಗಿ ಎಲ್ಲ ಕಾರ್ಮಿಕರಿಗೆ ಆಹಾರ ಸಾಮಗ್ರಿಗಳ ಕಿಟ್​ಗಳನ್ನು ವಿತರಣೆ ಮಾಡಬೇಕು ಎಂದು ಜಿಲ್ಲಾ ಆಸರೆ ಕಟ್ಟಡ ಅಸಂಘಟಿತ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಎನ್. ಕೆ. ಚಂದ್ರಶೇಖರ್ ಆಗ್ರಹಿಸಿದ್ದಾರೆ.

Chandrasekhar
ಎನ್. ಕೆ. ಚಂದ್ರಶೇಖರ್ ಸುದ್ದಿಗೋಷ್ಠಿ
author img

By

Published : May 25, 2020, 8:43 PM IST

ದಾವಣಗೆರೆ: ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಕೆಲಸ ಸಿಗದೇ ಕಟ್ಟಡ ಕಾರ್ಮಿಕರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಹಾಗಾಗಿ ಆಹಾರ ಸಾಮಗ್ರಿಗಳ ಕಿಟ್​ಗಳನ್ನು ಸಮರ್ಪಕವಾಗಿ ಎಲ್ಲ ಕಾರ್ಮಿಕರಿಗೆ ವಿತರಣೆ ಮಾಡಬೇಕು ಎಂದು ಜಿಲ್ಲಾ ಆಸರೆ ಕಟ್ಟಡ ಅಸಂಘಟಿತ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಎನ್. ಕೆ. ಚಂದ್ರಶೇಖರ್ ಆಗ್ರಹಿಸಿದ್ದಾರೆ.

ಕಟ್ಟಡ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಎನ್.‌ಕೆ.ಚಂದ್ರಶೇಖರ್
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್-19 ಕಷ್ಟದಲ್ಲಿರುವ ಕಾರ್ಮಿಕರಿಗೆ ಸಹಾಯಧನ ಸರಿಯಾಗಿ ಸಿಗುತ್ತಿಲ್ಲ.‌ ದಾವಣಗೆರೆ ಉತ್ತರ ಹಾಗೂ ದಕ್ಷಿಣ ವಲಯಗಳಲ್ಲಿ ಕಾರ್ಮಿಕರಿಗೆ ವಿತರಿಸಲು ತಯಾರಿಸಿರುವ ಆಹಾರ ಕಿಟ್ ಗಳನ್ನು ಖಾಸಗಿ ಸಂಸ್ಥೆಯಾದ ಸೋಮೇಶ್ವರ ಶಾಲೆಯಲ್ಲಿ ದಾಸ್ತಾನು ಮಾಡಲಾಗಿದೆ. ಕಾರ್ಮಿಕರ ಕಾರ್ಡ್ ಸೇರಿದಂತೆ ಇತರ ನೆಪವೊಡ್ಡಿ ಕಿಟ್​ಗಳನ್ನು ನೀಡುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಸುಮಾರು 4 ಸಾವಿರ ಕಾರ್ಮಿಕರಿದ್ದು, ಸರ್ಕಾರ ಘೋಷಿಸಿರುವ 5 ಸಾವಿರ ರೂಪಾಯಿ ಕಾರ್ಮಿಕರ ಖಾತೆಗೆ ಬಂದಿಲ್ಲ. ಆಹಾರ ಸಾಮಗ್ರಿ ವಿತರಣೆಯಲ್ಲಿ‌ ತಾರತಮ್ಯ ನೀತಿ ಅನುಸರಿಸಲಾಗುತ್ತಿದ್ದು, ಜಿಲ್ಲಾಡಳಿತ ತಕ್ಷಣ ಮಧ್ಯಪ್ರವೇಶಿಸಿ ಕಟ್ಟಡ ಕಾರ್ಮಿಕರಿಗೆ ಆಹಾರದ ಕಿಟ್​ಗಳು ಸಿಗುವಂತೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.