ದಾವಣಗೆರೆ: ಅವಧಿಗೂ ಮುನ್ನ ಚುನಾವಣೆ ನಡೆಸುವ ಉದ್ದೇಶವಿಲ್ಲ, 2023 ಚುನಾವಣೆಗೆ ಬೇಕಾದ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಚುನಾವಣೆ ಬಗ್ಗೆ ಕೇಂದ್ರ ನಾಯಕರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಸ್ಪಷ್ಡಪಡಿಸಿದರು. ದಾವಣಗೆರೆಯಲ್ಲಿ ಮಾತನಾಡಿದ ಅವರು 150 ಸ್ಥಾನಗಳನ್ನು ಚುನಾವಣೆಯಲ್ಲಿ ಗೆಲ್ಲಬೇಕಾದ ಕಾರ್ಯತಂತ್ರಗಳನ್ನ ರೂಪಿಸಲಾಗುತ್ತಿದೆ ಎಂದರು.
ಬಿಜೆಪಿಗೆ ರಾಜ್ಯದಲ್ಲಿ ವಾತಾವರಣ ಚೆನ್ನಾಗಿದೆ. ಒಂದು ವಾರದ ನಂತರ ರಾಜ್ಯ ಪ್ರವಾಸ ಆರಂಭಿಸಲಾಗುವುದು. ಪ್ರತಿ ಜಿಲ್ಲೆಗೂ ಭೇಟಿ ನೀಡುವೆ, ಬೇರೆ ರಾಜ್ಯಗಳಲ್ಲಿ ಆದ ಸ್ಥಿತಿಯೇ ಕಾಂಗ್ರೆಸ್ಗೆ ನಮ್ಮ ರಾಜ್ಯದಲ್ಲೂ ಆಗುತ್ತದೆ ಎಂದು ಭವಿಷ್ಯ ನುಡಿದರು. ಕಮಿಷನ್ ಆರೋಪ ವಿಚಾರವಾಗಿ ಮಾತನಾಡಿದ ಬಿಎಸ್ವೈ ಬೇಜವಾಬ್ದಾರಿತನದ ಹೇಳಿಕೆಗೆ ಏನ್ ಹೇಳೋಕೆ ಆಗುತ್ತದೆ? ಎಂದು ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಗರಂ ಆದರು.
ಕಮಿಷನ್ ವಿಚಾರವಾಗಿ ಸಾಕ್ಷಿ ಕೊಡಲು ಆಗುತ್ತಾ? ಎಂಬ ದಿಂಗಾಲೇಶ್ವರ ಶ್ರೀಗಳ ಹೇಳಿಕೆಗೆ ಪ್ರತಿಕ್ರಿಯಿಸಿ ಸ್ವಾಮೀಜಿಗಳು ಬೇಜವಾಬ್ದಾರಿತನದ ಹೇಳಿಕೆ ನೀಡಬಾರದು ಎಂದು ಮನವಿ ಮಾಡಿದರು.
ಇದನ್ನೂ ಓದಿ: ನನ್ನ ಸ್ಥಾನಮಾನದ ಬಗ್ಗೆ ಪಕ್ಷದ ರಾಷ್ಟ್ರೀಯ ನಾಯಕರು ತೀರ್ಮಾನಿಸುತ್ತಾರೆ: ಬಿ.ವೈ. ವಿಜಯೇಂದ್ರ