ದಾವಣಗೆರೆ: ಜಿಲ್ಲೆಯ ನ್ಯಾಮತಿ ತಾಲೂಕಿನ ಸಂತ ಸೇವಾಲಾಲ್ ಜನ್ಮಸ್ಥಳವಾದ ಸೂರಗೊಂಡನಕೊಪ್ಪದಲ್ಲಿ ಸೇವಾಲಾಲ್ ಜಯಂತಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಿಎಂ ಭಾಷಣದ ವೇಳೆ ಮಾಜಿ ಶಾಸಕ ಶಿವಮೂರ್ತಿ ನಾಯಕ್ ಗಲಾಟೆ ನಡೆಸಿದರು.
ಸಿಎಂ ಯಡಿಯೂರಪ್ಪ ಭಾಷಣ ಮಾಡುತ್ತಿದ್ದ ವೇಳೆ ಸೇವಾಲಾಲ್ ಹೆಸರಿನಲ್ಲಿ ಮೆಡಿಕಲ್ ಕಾಲೇಜ್ ತೆರೆಯುವಂತೆ ಪಟ್ಟು ಹಿಡಿದ ಮಾಜಿ ಶಾಸಕ ಶಿವಮೂರ್ತಿ ನಾಯಕ್ , ಸಿಎಂ ವಿರುದ್ಧ ಆಕ್ರೋಶ ಹೊರಹಾಕಿದರು. ಸಂತ ಸೇವಾಲಾಲ್ ಹೆಸರಿನಲ್ಲಿ ಮೆಡಿಕಲ್ ಕಾಲೇಜು ಆರಂಭಿಸುತ್ತೇವೆ ಎಂಬ ಭರವಸೆಯನ್ನು ಕೇಳುತ್ತಲೇ ಬಂದಿದ್ದೇವೆ. ಆದರೆ ಈವರೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಈ ಬಗ್ಗೆ ಕ್ರಮ ವಹಿಸಿಲ್ಲ. ಕೂಡಲೇ ಕಾಲೇಜು ಮಂಜೂರು ಮಾಡಲೇಬೇಕು ಎಂದು ಪಟ್ಟು ಹಿಡಿದರು.
ಓದಿ : ಬಂಜಾರ ಅಭಿವೃದ್ಧಿ ನಿಗಮಕ್ಕೆ 10 ಕೋಟಿ ಅನುದಾನ ಘೋಷಿಸಿದ ಸಿಎಂ ಬಿಎಸ್ವೈ
ಭಾಷಣಕ್ಕೆ ಅಡ್ಡಿಯಾದರೂ ಕೂಡ ಸಿಎಂ ತಮ್ಮ ಪಾಡಿಗೆ ತಾವು ಮಾತು ಮುಂದುವರಿಸಿದರು. ಬಳಿಕ ವೇದಿಕೆ ಮುಂದೆ ಗಲಾಟೆ ಮಾಡುತ್ತಿದ್ದ ಶಿವಮೂರ್ತಿ ನಾಯಕ್ ರನ್ನು ಪೊಲೀಸರು ಹೊರ ಕರೆದುಕೊಂಡು ಹೋದರು.