ಬಾಗಲಕೋಟೆ: ಕೊರೊನಾ ವೈರಸ್ ಭೀತಿ ರಾಜ್ಯಾದ್ಯಂತ ಹೆಚ್ಚಾಗಿದ್ದು, ಜಿಲ್ಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಂಗೂಬಾಯಿ ಮಾನಕರ ಹೇಳಿದರು.
ನಗರದಲ್ಲಿರುವ ತಮ್ಮ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೊರೊನಾ ವೈರಸ್ ಭೀತಿಯಿಂದ ಮಾಸ್ಕ್ಗಳ ಮಾರಾಟ ಸಾಕಷ್ಟಾಗುತ್ತಿದೆ. ಜನ ದಟ್ಟಣೆ ಹೆಚ್ಚಿರುವ ಕಡೆಗಳಲ್ಲಿ ಜನರು ಹೆಚ್ಚಾಗಿ ಭಾಗಿಯಾಗಬಾರದು. ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಜಾತ್ರೆ ಮೊದಲಾದ ಕಡೆಗಳಲ್ಲಿ ವೈರಸ್ ಹರಡುವ ಸಾಧ್ಯತೆ ಅಧಿಕವಾಗಿರುತ್ತದೆ. ಎಚ್ಚರಿಕೆಯಿಂದ ಇರಬೇಕು ಎಂದು ಸಲಹೆ ನೀಡಿದರು.
ಚೀನಾ ಹಾಗೂ ಪ್ಯಾರಿಸ್ನಿಂದ ಐದು ಜನರು ಬಾಗಲಕೋಟೆ ನಗರಕ್ಕೆ ಆಗಮಿಸಿದ್ದು, ಅವರ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ನಿಗಾ ಇಟ್ಟಿದ್ದಾರೆ. ಇಲ್ಲಿನ ನಿವಾಸಿಗಳು ಕೊರೊನಾ ವೈರಸ್ ಹಿನ್ನೆಲೆ ಭಯದಿಂದ ಆಗಮಿಸಿದ್ದಾರೆ. ಅವರಿಗೆ ಆರೋಗ್ಯದಲ್ಲಿ ಯಾವುದೇ ಏರುಪೇರು ಕಂಡಿಲ್ಲ. ಆದರೂ ಸಹ ದಿನಾಲು ತಪಾಸಣೆ ಮಾಡಲಾಗುತ್ತದೆ. ಈ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ನಿಗಾ ಇಟ್ಟಿದ್ದಾರೆ ಎಂದು ತಿಳಿಸಿದರು.