ದಾವಣಗೆರೆ: ದಾವಣಗೆರೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ಮಾಜಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಮೇಲೆ ದಿನ ಕಳೆದಂತೆ ಒತ್ತಡ ಹೆಚ್ಚುತ್ತಿದ್ದು, ಕಾಂಗ್ರೆಸ್ನ ಮಾಜಿ ಶಾಸಕರು, ಹಾಲಿ ಶಾಸಕರು ಮತ್ತು ಪಕ್ಷದ ಮುಖಂಡರು ಮಲ್ಲಿಕಾರ್ಜುನ್ ಸ್ಪರ್ಧಿಸಿದರೆ ಬಿಜೆಪಿಗೆ ತಕ್ಕ ಪ್ರತಿರೋಧ ಒಡ್ಡಬಹುದು ಎಂಬ ಲೆಕ್ಕಾಚಾರ ಹಾಕಿದ್ದಾರೆ.
ನಾಳೆ ದಾವಣಗೆರೆಯಿಂದ ಯಾರು ಸ್ಪರ್ಧಿಸುತ್ತಾರೆ ಎಂಬುದಕ್ಕೆ ಉತ್ತರ ಸಿಗಲಿದೆ ಎಂದು ಸ್ವತಃ ಮಲ್ಲಿಕಾರ್ಜುನ್ ಅವರೆ ಹೇಳಿದ್ದಾರೆ. ಇನ್ನು ಚುನಾವಣೆಯಲ್ಲಿ ಮಲ್ಲಿಕಾರ್ಜುನ್ ಹೈಕಮಾಂಡ್ ಬಯಸಿದರೆ ಕಣಕ್ಕಿಳಿಯುತ್ತೇನೆ ಎಂದು ಹೇಳಿದ ಬಳಿಕ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಉತ್ಸಾಹ ಕಂಡು ಬಂದಿತ್ತು. ಆದರೆ ದಿಢೀರ್ ಬೆಳವಣಿಗೆಯಲ್ಲಿ ಮತ್ತೆ ಎಲ್ಲವೂ ಉಲ್ಟಾ ಪಲ್ಟಾ ಆಗಿದೆ.
ಬೆಂಗಳೂರಿಗೆ ಹೋಗಿ ನಾಯಕರ ಜೊತೆ ಮಾತುಕತೆ ನಡೆಸಿ ವಾಪಾಸ್ ಬಂದ ಬಳಿಕ ಬೇರೆ ಯಾರನ್ನು ಕಣಕ್ಕಿಳಿಸದೆ ಮಲ್ಲಿಕಾರ್ಜುನ್ ಅವರನ್ನೆ ಆಯ್ಕೆ ಮಾಡಿ ಎಂಬ ಬಯಕೆಯನ್ನು ಕಾಂಗ್ರೆಸ್ನ ಹಾಲಿ ಮತ್ತು ಮಾಜಿ ಶಾಸಕರು ಹೊರ ಹಾಕುತ್ತಿದ್ದಾರೆ. ಇದೇ ವಿಚಾರವನ್ನ ಬೆಂಗಳೂರಿನಲ್ಲಿ ನಡೆದಿದ್ದ ಸಭೆಯಲ್ಲೂ ಸ್ಪಷ್ಟವಾಗಿ ಹೇಳಿದ್ದಾರೆ.ಮಲ್ಲಿಕಾರ್ಜುನ್ ಭೇಟಿ ಮಾಡಿದ ಜಗಳೂರು ಮಾಜಿ ಶಾಸಕಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್. ಬಿ.ಮಂಜಪ್ಪ, ಜಿಲ್ಲಾ ಪಂಚಾಯತ್ ಸದಸ್ಯ ತೇಜಸ್ವಿ ಪಟೇಲ್ ಸೇರಿದಂತೆ ಇನ್ನೆರಡು ಹೆಸರುಗಳು ಹೈಕಮಾಂಡ್ ಅಂಗಳದಲ್ಲಿತ್ತು. ವಯಸ್ಸಾಗಿರುವ ಕಾರಣದಿಂದ ಸ್ಪರ್ಧೆಗೆ ಶಾಮನೂರು ಶಿವಶಂಕರಪ್ಪ ನಿರಾಕರಿಸಿದ್ದರು.
ಜಗಳೂರು ಮಾಜಿ ಶಾಸಕ ಹೆಚ್. ಪಿ. ರಾಜೇಶ್ ದಾವಣಗೆರೆಯಲ್ಲಿ ಮಲ್ಲಿಕಾರ್ಜುನ್ ಭೇಟಿ ಮಾಡಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಾಜಿ ಶಾಸಕರ ಜೊತೆ ಈಗಾಗಲೇ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಯಾರಿಗೆ ಟಿಕೆಟ್ ನೀಡಬೇಕು ಎಂಬ ಬಗ್ಗೆ ಅಭಿಪ್ರಾಯ ಕೇಳಿದ್ದಾರೆ. ಎಸ್. ಎಸ್. ಮಲ್ಲಿಕಾರ್ಜುನ್ಗೆ ಕೊಟ್ಟರೆ ಈ ಬಾರಿ ಉತ್ತಮ ಫಲಿತಾಂಶ ಬರಲಿದೆ.
ಶಾಮನೂರು ಶಿವಶಂಕರಪ್ಪ ಮತ್ತು ಮಲ್ಲಿಕಾರ್ಜುನ್ ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಜಿಲ್ಲೆಯಲ್ಲಿ ಪರಿಚಿತವಿರುವ ಹೆಸರು. ಪಕ್ಷದ ಸಂಘಟನೆ ದೃಷ್ಟಿಯಿಂದ ಒಳ್ಳೆಯದಾಗಲಿದೆ.ಎಸ್ಎಸ್ ಅವರಿಗೆ ಟಿಕೆಟ್ ನೀಡಿದರೆ ಮುಂಬರುವ ದಿನಗಳಲ್ಲಿ ಪಕ್ಷಕ್ಕೆ ಒಳ್ಳೆಯದಾಗಲಿದೆ ಎಂಬ ವಿಚಾರವನ್ನು ರಾಜ್ಯ ನಾಯಕರಿಗೆ ತಿಳಿಸಿರುವುದಾಗಿ ಹೇಳಿದರು.ಜಿಲ್ಲೆಯಲ್ಲಿ ಎರಡನೇ ಹಂತದಲ್ಲಿ ಚುನಾವಣೆ ನಡೆಯುತ್ತಿರುವುದರಿಂದ ಇನ್ನೂ ಕಾಲಾವಕಾಶ ಇದೆ. ಮಲ್ಲಿಕಾರ್ಜುನ್ ಕಾದು ನೋಡೋಣ ಎಂದು ಹೇಳಿದ್ದಾರೆ. ಪಕ್ಷವು ಒಳ್ಳೆಯ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬ ವಿಶ್ವಾಸ ಇದೆ ಎಂದು ತಿಳಿಸಿದರು.