ದಾವಣಗೆರೆ: ಹೊನ್ನಾಳಿ ಪಟ್ಟಣಕ್ಕೆ ಆಗಮಿಸಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರಗೆ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು. ಶಾಸಕ ರೇಣುಕಾಚಾರ್ಯ ಹುಟ್ಟುಹಬ್ಬ ಹಿನ್ನೆಲೆ ಅಭಿನಂದನಾ ಸಮಾರಂಭಕ್ಕೆ ಆಗಮಿಸಿದ ಅವರಿಗೆ ಹೂಮಳೆ ಸುರಿಸಿ, ಬೃಹತ್ ಸೇಬು ಹಣ್ಣಿನ ಹಾರ ಹಾಕಿ ಸ್ವಾಗತ ಕೋರಲಾಯಿತು.
ಇದೇ ವೇಳೆ, ಹೊನ್ನಾಳಿ ಪಟ್ಟಣದ ಸಂತೆ ಮೈದಾನದಲ್ಲಿ ಹಮ್ಮಿಕೊಂಡಿರುವ ಅಭಿನಂದನಾ ಸಮಾರಂಭಕ್ಕೆ ತೆರಳುವ ವೇಳೆ ಒಂದೇ ಕಾರಿನಲ್ಲಿ ತೆರಳಲು ಸಚಿವ ಭೈರತಿ ಬಸವರಾಜ್ ಬಿ.ವೈ ವಿಜಯೇಂದ್ರ ಅವರಿಗೆ ಮನವಿ ಮಾಡಿದರು. ‘ಅಣ್ಣೋ ಬಾರಣ್ಣೋ ನನ್ನ ಕಾರಿನಲ್ಲಿ ಹೋಗೊಣ’ ಎಂದು ಕರೆದರು. ಅವರ ಮನವಿಗೆ ಸ್ಪಂದಿಸಿದ ವಿಜೇಂದ್ರ ಸಚಿವರ ಕಾರಿನಲ್ಲೇ ತೆರಳಿ ಗಮನ ಸೆಳೆದರು.
ಈ ವೇಳೆ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್, ಸಂಸದ ಜಿಎಂ ಸಿದ್ದೇಶ್ವರ್ , ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಜೊತೆಗಿದ್ದರು.
ಇದನ್ನೂ ಓದಿ: ಹೊನ್ನಾಳಿ ಶಾಸಕ ರೇಣುಕಾಚಾರ್ಯ ಜನ್ಮದಿನ ಸಂಭ್ರಮ: ಅಭಿಮಾನಿಗಳಿಂದ ಕ್ಷೀರಾಭಿಷೇಕ