ದಾವಣಗೆರೆ: ಜಿಲ್ಲೆಯಲ್ಲಿ ಭಾರಿ ಮಳೆ ಸುರಿದಿದ್ದು, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ತುಂಗಭದ್ರಾ ನದಿಗೆ ಹೆಚ್ಚಿನ ನೀರು ಹರಿದು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಹರಿಹರ ಹಾಗೂ ಹೊನ್ನಾಳಿ ತಾಲೂಕಿನಲ್ಲಿ ಪ್ರವಾಹ ಭೀತಿ ಎದುರಾಗಿದೆ.
ಇನ್ನು ಕೆಲವೆಡೆ ರಸ್ತೆ ಮೇಲೆ ನೀರು ಹರಿಯುತ್ತಿದ್ದು, ಸಂಚಾರ ಅಸ್ತವ್ಯಸ್ತಗೊಂಡಿದೆ. ಹೊನ್ನಾಳಿ ತಾಲೂಕಿನ ಸಾರಥಿ ಗ್ರಾಮದಲ್ಲಿ ರಸ್ತೆ ಮೇಲೆ ನೀರು ಹರಿಯುತ್ತಿದ್ದು, ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ಲೋಕಿಕೆರೆ, ಕೈದಾಳೆ, ಚನ್ನಗಿರಿ ತಾಲೂಕಿನ ಸೂಳೆಕೆರೆ, ಮಾಗೇನಹಳ್ಳಿ ಸೇರಿದಂತೆ ಹಲವೆಡೆ ಭಾರಿ ವರ್ಷಧಾರೆ ಸುರಿದಿದ್ದು, ಅಪಾರ ಪ್ರಮಾಣದಲ್ಲಿ ಬೆಳೆ ನಾಶವಾಗಿದೆ. ಮಾಗೇನಹಳ್ಳಿಯಲ್ಲಿ ನೂರಾರು ಎಕರೆ ಕೃಷಿ ಭೂಮಿ ಜಲಾವೃತಗೊಂಡಿದ್ದು, ಭತ್ತ ಬೆಳೆದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಇನ್ನು ಮಳೆಯಾಗುವ ಸೂಚನೆ ಇದ್ದು, ನದಿ ತೀರದ ಜನರು ಎಚ್ಚರದಿಂದಿರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.