ದಾವಣಗೆರೆ: ಕಾಲೇಜುಗಳ ಪುನಾರಂಭ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ಅವರು, ಈ ಬಗ್ಗೆ ಉನ್ನತ ಶಿಕ್ಷಣ ಸಚಿವರು ನಿರ್ಧಾರ ಪ್ರಕಟಿಸಲಿದ್ದು, ಜಿಲ್ಲೆಯಲ್ಲಿ ನ.23 ರಿಂದ ಕಾಲೇಜುಗಳು ಪುನಾರಂಭವಾಗಲಿವೆ ಎಂದು ತಿಳಿಸಿದರು.
ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕಾಲೇಜು ಆರಂಭಿಸಲು ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.
ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೆಕ್ಕೆಜೋಳ ಹಾನಿಗೆ 500 ಕೋಟಿ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಖರೀದಿ ಕೇಂದ್ರ ಆರಂಭಿಸುವ ಬಗ್ಗೆ ಸಿಎಂ ಜತೆ ಚರ್ಚಿಸಿದ್ದೇನೆ. ನಮ್ಮ ಸರ್ಕಾರ ರೈತರ ಪರವಾಗಿದೆ. ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸುವ ಚಿಂತನೆ ನಡೆದಿದೆ. ಈ ಬಗ್ಗೆ ಎಲ್ಲ ರೀತಿಯ ಪ್ರಯತ್ನ ಮುಂದುವರೆದಿದೆ ಎಂದು ಮಾಹಿತಿ ನೀಡಿದರು.