ದಾವಣಗೆರೆ: ಜಿಲ್ಲೆಯ ಕಾಲೇಜೊಂದರಲ್ಲಿ ಹಿಜಾಬ್-ಕೇಸರಿಶಾಲು ವಿವಾದ ಉಂಟಾದ ಹಿನ್ನೆಲೆಯಲ್ಲಿ ಸ್ಥಳೀಯ ಶಾಸಕ ಎಂ.ಪಿ.ರೇಣುಕಾಚಾರ್ಯ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿದರು.
ಹೊನ್ನಾಳಿ ಪಟ್ಟಣದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಇಂದು ಶಾಸಕ ರೇಣುಕಾಚಾರ್ಯ ಅವರು ಭೇಟಿ ನೀಡಿದ್ದರು. ಈ ವೇಳೆ ಹಿಜಾಬ್ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರ ಜೊತೆ ಚರ್ಚೆ ನಡೆಸಿದರು. ಈ ವೇಳೆ ಶಾಸಕರು, ಕಾಲೇಜಿಗೆ ಹಿಜಾಬ್ ಧರಿಸಿಕೊಂಡು ಬನ್ನಿ. ಆದರೆ, ಹಿಜಾಬ್ ತೆಗೆದಿಟ್ಟು ತರಗತಿಯೊಳಗೆ ಹೋಗಿ ಎಂದು ವಿದ್ಯಾರ್ಥಿನಿಯರಿಗೆ ಸಲಹೆ ನೀಡಿದರು.
ಇದಕ್ಕೆ ಉತ್ತಿರಿಸಿದ ವಿದ್ಯಾರ್ಥಿನಿಯರು, ನಾವು ಮೊದಲಿನಿಂದಲೂ ಹಿಜಾಬ್ ಧರಿಸಿಕೊಂಡು ಕಾಲೇಜಿಗೆ ಬರುತ್ತಿದ್ದೇವೆ. ನಮ್ಮ ಹಿರಿಯ ವಿದ್ಯಾರ್ಥಿಗಳು ಕೂಡ ಇದೇ ರೀತಿ ಬರುತ್ತಿದ್ದರು. ಆಗ ಸಮಸ್ಯೆ ಇರಲಿಲ್ಲ. ಇದೀಗ ಸಮಸ್ಯೆ ಶುರುವಾಗಿದೆ. ನಾವು ಹಿಜಾಬ್ ಧರಿಸದಿದ್ದರೆ ಪೋಷಕರು ನಮ್ಮನ್ನು ಕಾಲೇಜಿಗೆ ಕಳುಹಿಸುವುದಿಲ್ಲ.
ನಾವು ಹಿಜಾಬ್ ಧರಿಸುವುದನ್ನು ಬಿಡಲ್ಲ. ಅವರು ಶಾಲು ಹಾಕಿಕೊಂಡು ಬರಲಿ, ನಮಗೇನು ಅಭ್ಯಂತರವಿಲ್ಲ. ನಾವು ಹಿಜಾಬ್ ಹಾಕಿಯೇ ಕಾಲೇಜಿಗೆ ಬರುತ್ತೇವೆ ಎಂದು ಸಮಾಜಾಯಿಷಿ ನೀಡಿದರು.
ಇದರಿಂದ ಕೋಪಗೊಂಡ ರೇಣುಕಾಚಾರ್ಯ, ನಾಳೆ ಬರುವ ಕೋರ್ಟ್ ಆದೇಶವನ್ನು ಪಾಲಿಸುವಂತೆ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗೆ ಸೂಚನೆ ನೀಡಿದರು.