ದಾವಣಗೆರೆ: ರಾಜ್ಯಾದ್ಯಂತ ಚರ್ಚೆ ಆಗುತ್ತಿರುವ ಜನ ಪ್ರತಿನಿಧಿಗಳ ಹನಿಟ್ರ್ಯಾಪ್ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ವಿಡಿಯೋ ಡಿಲೀಟ್ ಮಾಡುವಂತೆ ಯಾರಿಂದಲೂ ಒತ್ತಡ ಬಂದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹನಿ ಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕಾನೂನು ಪ್ರಕಾರ ನಡೆಯುತ್ತಿದೆ. ಇದರಲ್ಲಿ ಯಾವ ಒತ್ತಡವೂ ಇಲ್ಲ. ಅಧಿಕಾರಿಗಳಿಗೆ ಕಾನೂನಿನ ಅನ್ವಯ ತನಿಖೆ ಮಾಡುವಂತೆ ಹೇಳಿದ್ದೇನೆ ಎಂದು ತಿಳಿಸಿದರು.
ಹಿರೇಕೆರೂರು, ರಾಣೆಬೆನ್ನೂರಿನಲ್ಲಿ ಪ್ರಚಾರದ ವೇಳೆ ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಹೇಳಿಕೆಗೆ ಟಾಂಗ್ ನೀಡಿದ ಬಸವರಾಜ್ ಬೊಮ್ಮಾಯಿ, ಯಾರ ಹವಾ ಈ ಕ್ಷೇತ್ರಗಳಲ್ಲಿ ನಡೆಯುವುದಿಲ್ಲ. ಡಿಸೆಂಬರ್ 9 ರಂದು ಜನ ತೀರ್ಮಾನ ಮಾಡಿದ್ದು ಗೊತ್ತಾಗುತ್ತೆ ಎಂದು ಅಭಿಪ್ರಾಯಪಟ್ಟಿದ್ದಾರೆ.