ದಾವಣಗೆರೆ: ಕಾಂಗ್ರೆಸ್ ಶಾಸಕರಾದ ಆನಂದ್ ಸಿಂಗ್ ಮತ್ತು ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿರುವ ಬಗ್ಗೆ ಏನೂ ಹೇಳುವುದಿಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ್ ಪಾಟೀಲ್ ಹೇಳಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಬ್ಬರು ಶಾಸಕರು ರಾಜೀನಾಮೆ ಕೊಟ್ಟಿದ್ದಾರೆ ಅಷ್ಟೇ. ಆನಂದ್ ಸಿಂಗ್ ಜಿಂದಾಲ್ಗೆ ಭೂಮಿ ನೀಡುತ್ತಿರುವುದು ಸೇರಿ ವಿವಿಧ ಕಾರಣಗಳನ್ನು ನೀಡಿದ್ದಾರೆ. ರಮೇಶ್ ಜಾರಕಿಹೊಳಿ ಅವರು ಮೊದಲಿನಿಂದಲೂ ಹೇಳುತ್ತಿದ್ದರು. ಈ ಕುರಿತು ಹೆಚ್ಚು ಮಾತನಾಡುವುದಿಲ್ಲ ಎಂದು ಹೇಳಿದರು.