ETV Bharat / state

ಡಿಕೆಶಿ 'ರಿವರ್ಸ್' ಆಪರೇಷನ್ ಮಾಡಿದ್ರೆ ನಾನು ರಾಜಕೀಯ 'ನಿವೃತ್ತಿ' ಪಡೆಯುತ್ತೇನೆ: ರೇಣುಕಾಚಾರ್ಯ ಸವಾಲು - ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್

ನಮಗೂ ತೋಳ್ಬಲ ಇದೆ. ಕಾರ್ಯಕರ್ತರ ಪಡೆ ಇದೆ. ಬಿಜೆಪಿಯಲ್ಲಿ ನಾವೆಲ್ಲರೂ ಒಂದಾಗಿದ್ದೇವೆ. ಯಾವುದೇ ಕಾರಣಕ್ಕೂ ಬಿಜೆಪಿಯಲ್ಲಿ ರಿವರ್ಸ್ ಆಪರೇಷನ್ ಮಾಡಲು ಸಾಧ್ಯವಿಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.

Renukacharya
ರೇಣುಕಾಚಾರ್ಯ
author img

By

Published : Jun 5, 2020, 8:22 PM IST

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿಜೆಪಿಯಲ್ಲಿ ರಿವರ್ಸ್ ಆಪರೇಷನ್ ಮಾಡಿದ್ರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಬಹಿರಂಗ ಸವಾಲು ಹಾಕಿದರು.

ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನನ್ನ ಈ ಸವಾಲನ್ನು ಡಿಕೆಶಿ ಸ್ವೀಕರಿಸಲಿ. ನಮಗೂ ತೋಳ್ಬಲ ಇದೆ. ಕಾರ್ಯಕರ್ತರ ಪಡೆ ಇದೆ. ಬಿಜೆಪಿಯಲ್ಲಿ ನಾವೆಲ್ಲರೂ ಒಂದಾಗಿದ್ದೇವೆ. ಯಾವುದೇ ಕಾರಣಕ್ಕೂ ಬಿಜೆಪಿಯಲ್ಲಿ ರಿವರ್ಸ್ ಆಪರೇಷನ್ ಮಾಡಲು ಸಾಧ್ಯವಿಲ್ಲ ಎಂದರು.

ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ
ಯತ್ನಾಳ್ ಹಾಗೆಲ್ಲಾ ಮಾತನಾಡಬಾರದು: ಬಿಜೆಪಿಯಲ್ಲಿ ಯಾವುದೇ ಭಿನ್ನಮತ ಇಲ್ಲ. ಅಭಿಪ್ರಾಯಗಳಲ್ಲಿ ಸಣ್ಣಪುಟ್ಟ ವ್ಯತ್ಯಾಸ ಆಗಿದೆ ಅಷ್ಟೇ. ಅದನ್ನೇ ವೈಭವೀಕರಣ ಮಾಡುವುದು ಬೇಡ.‌ ಬಿಜೆಪಿಯಲ್ಲಿ ಸಿಎಂ ಯಡಿಯೂರಪ್ಪ ಪ್ರಶ್ನಾತೀತ ನಾಯಕ ಎಂದ ಅವರು, ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಿಎಂ ಬಗ್ಗೆ ಆ ರೀತಿ ಮಾತನಾಡಬಾರದಿತ್ತು.‌ ಕೊರೊನಾ ಸಂಕಷ್ಟದ ಸಮಯದಲ್ಲಿ ಸಿಎಂ ರಾಜ್ಯವನ್ನು ಹೇಗೆ ಮುನ್ನಡೆಸಿದ್ದಾರೆ ಎಂಬುದು ಎಲ್ಲರಿಗೂ ಗೊತ್ತು. ಪ್ರಧಾನಿ ನರೇಂದ್ರ ಮೋದಿಯವರೇ ಶಹಬ್ಬಾಸ್​ಗಿರಿ ನೀಡಿದ್ದಾರೆ. ಯತ್ನಾಳ್ ಹಾಗೆಲ್ಲಾ ಮಾತನಾಡಬಾರದು ಎಂದು ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.