ETV Bharat / state

ದಾವಣಗೆರೆಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣ ಸ್ಫೋಟಕ ವಶ

author img

By

Published : Jul 31, 2021, 10:27 AM IST

ದಾವಣಗೆರೆಯ ಆಲೂರು ಬಳಿ ಕಾರ್ಯಾಚರಣೆ ನಡೆಸಿದ ಪೊಲೀಸರ ತಂಡ, ಅಕ್ರಮವಾಗಿ ಸಾಗಿಸುತ್ತಿದ್ದ ಸ್ಫೋಟಕಗಳನ್ನು ವಶಪಡಿಸಿಕೊಂಡಿದೆ.

explosive sized in Dhavangere
ಅಕ್ರಮ ಸ್ಪೋಟಕ ವಶ

ದಾವಣಗೆರೆ : ತಾಲೂಕಿನ ಆಲೂರು ಗ್ರಾಮದ ಬಳಿ ಕಾರ್ಯಾಚರಣೆ ನಡೆಸಿದ ಪೂರ್ವ ವಲಯ ಐಜಿ ಸ್ಕ್ವ್ಯಾಡ್ ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಸ್ಫೋಟಕಗಳನ್ನು ವಶಕ್ಕೆ ಪಡೆದಿದೆ.

ಆಲೂರು ಬಳಿಯ ಕಲ್ಲಿನ ಕ್ವಾರೆಗೆ ಈ ಸ್ಫೋಟಕಗಳನ್ನು ಸಾಗಿಸಲಾಗುತ್ತಿತ್ತು ಎಂದು ತಿಳಿದು ಬಂದಿದೆ. ಎರಡು ಬುಲೆರೋ ವಾಹನಗಳಲ್ಲಿ ಸಾಗಿಸುತ್ತಿದ್ದ 2,970 ಜಿಲೆಟಿನ್ ಜೆಲ್​ಗಳು ಮತ್ತು 790 ಎಲೆಕ್ಟ್ರಾನಿಕ್ ಡಿಟೋನೇಟರ್​ಗಳನ್ನು ವಶಕ್ಕೆ ಪಡೆಯಲಾಗಿದೆ.

ಓದು : ಡೆಂಟಲ್​ ವಿದ್ಯಾರ್ಥಿನಿಯನ್ನು ಗುಂಡಿಕ್ಕಿ ಕೊಂದು ಯುವಕ ಆತ್ಮಹತ್ಯೆಗೆ ಶರಣು..!

ಬಾಗಲಕೋಟೆಯಿಂದ ದಾವಣಗೆರೆಗೆ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೆ ಅಕ್ರಮವಾಗಿ ಅಪಾರ ಪ್ರಮಾಣದ ಸ್ಫೋಟಕ ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಐಜಿ ಸ್ಕ್ವ್ಯಾಡ್​ನ ಡಿವೈಎಸ್ಪಿ ತಿರುಮಲೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಸಾಗಿಸುತ್ತಿದ್ದ ಸ್ಫೋಟಕಗಳು, ಎರಡು ವಾಹನ ಮತ್ತು ಇಬ್ಬರು ಚಾಲಕರನ್ನು ವಶಕ್ಕೆ ಪಡೆದಿದ್ದಾರೆ.

ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.