ದಾವಣಗೆರೆ: ಲಾಕ್ಡೌನ್ ಜಾರಿಯಲ್ಲಿದ್ದರೂ ಕೂಡ ರಾಜಾರೋಷವಾಗಿ ಮದ್ಯವನ್ನು ಮಾರಾಟ ಮಾಡುತ್ತಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಿಆರ್ಟಿ ಕಾಲೋನಿಯಲ್ಲಿ ನಡೆದಿದೆ.
ರಸ್ತೆ ಬದಿ ಬಾಕ್ಸ್ನಲ್ಲಿ ಮದ್ಯ ಇಟ್ಟು ವ್ಯಕ್ತಿಯೋರ್ವ ಯಾರ ಭಯವಿಲ್ಲದೇ ರಾಜಾರೋಷವಾಗಿ ಮದ್ಯ ಮಾರಾಟ ಮಾಡುತ್ತಿದ್ದಾನೆ. ಜಿಲ್ಲಾಡಳಿತ ಲಾಕ್ಡೌನ್ನಲ್ಲಿ ಮದ್ಯ ಮಾರಾಟಕ್ಕೂ ನಿಷೇಧ ಹೇರಿದೆ. ಆದ್ರೂ ವ್ಯಕ್ತಿ ಯಾರ ಭಯವಿಲ್ಲದೆ ಮದ್ಯ ಮಾರಾಟ ಮಾಡುತ್ತಿದ್ದು, ಗ್ರಾಹಕರು ಅದನ್ನು ಕೊಂಡುಕೊಳ್ಳುತ್ತಿರುವ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ.
ಇದನ್ನೂ ಓದಿ: ಮೈಸೂರು ಜಿಪಂ ಕಚೇರಿಯಲ್ಲಿ ಜನರೇಟರ್ ಸ್ಫೋಟ: ತಪ್ಪಿದ ಭಾರೀ ಅನಾಹುತ
ಇಷ್ಟಾದರೂ ಕೂಡ ಅಬಕಾರಿ ಇಲಾಖೆ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆಯೇ? ಎಂಬ ಪ್ರಶ್ನೆ ಜನಸಾಮಾನ್ಯರಲ್ಲಿ ಕಾಡತೊಡಗಿದೆ. ಅಕ್ರಮವಾಗಿ ನಡೆಯುತ್ತಿರುವ ಮದ್ಯ ಮಾರಾಟಕ್ಕೆ ಅಬಕಾರಿ ಇಲಾಖೆಯ ಶ್ರೀರಕ್ಷೆ ಇದೆಯಾ ಎಂಬ ಅನುಮಾನ ಕಾಡತೊಡಗಿದೆ.