ದಾವಣಗೆರೆ: ಜಿಲ್ಲೆಯಲ್ಲಿ ಕೋವಿಡ್-19 ರೋಗವು ಹತೋಟಿಗೆ ಬರುವವರೆಗೂ ಪಾನ್ ಮಸಾಲ, ತಂಬಾಕು ಹಾಗೂ ಅದರ ಉತ್ಪನ್ನಗಳನ್ನು ಅಂಗಡಿಗಳಲ್ಲಿ ಮಾರಾಟ ಮತ್ತು ಬಳಕೆ ಮಾಡುವುದು ನಿಷೇಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ದಾವಣಗೆರೆ ನಗರದಲ್ಲಿ ತಂಬಾಕು ನಿಯಂತ್ರಣ ಕೋಶ ಮತ್ತು ಮಹಾನಗರ ಪಾಲಿಕೆಯ ವತಿಯಿಂದ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ಮಾಡಿ ತಂಬಾಕು ಹಾಗೂ ಅದರ ಉತ್ಪನ್ನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಜಪ್ತಿ ಮಾಡಲಾದ ವಸ್ತುಗಳನ್ನು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ನೋಡಲ್ ಅಧಿಕಾರಿಯಾದ ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಇವರಿಗೆ ಹಸ್ತಾಂತರಿಸಲಾಯಿತು. ಈ ವೇಳೆ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತಂಡದವರು ಹಾಗೂ ಪಾಲಿಕೆ ಆರೋಗ್ಯ ನಿರೀಕ್ಷಕರು ಹಾಜರಿದ್ದರು.