ದಾವಣಗೆರೆ: ಈ ಹಿಂದೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ನಾನು ಸಾಂದರ್ಭಿಕ ಶಿಶು ಎಂದು ಹೇಳುವ ಮೂಲಕ ಸುದ್ದಿಯಾಗಿದ್ರು. ಇದೀಗ ನಾನು ತಂತಿ ಮೇಲೆ ನಡೆಯುತ್ತಿದ್ದೇನೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿಕೊಂಡಿದ್ದಾರೆ.
ದಾವಣಗೆರೆಯಲ್ಲಿ ಹಮ್ಮಿಕೊಂಡಿರುವ ಶರವನ್ನರಾತ್ರಿ ದಸರಾ ಧರ್ಮ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ನಾನು ತಂತಿ ಮೇಲೆ ನಡೆಯುತ್ತಿದ್ದೇನೆ. ಹತ್ತು ಬಾರೀ ಯೋಚನೆ ಮಾಡಿ ನಿರ್ಧಾರ ಕೈಗೊಳ್ಳಬೇಕಿದೆ. ಕಟ್ಟೆಚ್ಚರ ವಹಿಸಬೇಕಿದೆ ಎಂದಿದ್ದಾರೆ.
ಅನುಭವ ಮಂಟಪ ನಿರ್ಮಾಣಕ್ಕೆ 50 ಕೋಟಿ ರೂ. ಬಿಡುಗಡೆ ಮಾಡಿದ್ದೇನೆ. ಹಣ ಬಿಡುಗಡೆಗೆ ಯೋಚನೆ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದಿದ್ದಾರೆ. ಇನ್ನು ಸಂಜೆ ಸುದ್ದಿಗಾರರೊಂದಿಗೆ ಮಾತನಾಡುವಾಗ ಕೇಂದ್ರ ಸರ್ಕಾರದ ಪರಿಹಾರಕ್ಕೆ ಕಾಯ್ತಾ ಇದ್ದೇನೆ ಎಂದು ಹೇಳುವ ಮೂಲಕ ನೋವು ತೋಡಿಕೊಂಡಿದ್ದರು. ಮತ್ತೀಗ ನಾನು ತಂತಿ ಮೇಲೆ ನಡೆಯುತ್ತಿದ್ದೇನೆ ಎಂದು ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ.