ದಾವಣಗೆರೆ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲು ಕಾರಣರಾದವರಿಗೆ ಸೂಕ್ತ ಸ್ಥಾನಮಾನ ಸಿಗಬೇಕು. ಉಪ ಚುನಾವಣೆಯಲ್ಲಿ ಸೋತವರನ್ನು ಎಂಎಲ್ಸಿ ಮಾಡಬೇಕು ಎಂದು ಅರಣ್ಯ ಸಚಿವ ಆನಂದ್ ಸಿಂಗ್ ಹೇಳಿದರು.
ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಲಕ್ಷ್ಮೀಪುರದಲ್ಲಿ ಮಾತನಾಡಿದ ಅವರು, ಹೆಚ್.ವಿಶ್ವನಾಥ್, ಎಂಟಿಬಿ ನಾಗರಾಜ್ ಸೇರಿದಂತೆ 17 ಶಾಸಕರು ಪಕ್ಷ ಬಿಟ್ಟು ರೆಬಲ್ ಆಗಿ ಬಂದಿದ್ದವರು. ಅವರನ್ನೂ ಎಂಎಲ್ಸಿ ಮಾಡಬೇಕು. ಈ ಬಗ್ಗೆ ಪಕ್ಷದ ವರಿಷ್ಠರು ಸೂಕ್ತ ತೀರ್ಮಾನ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಕೊರೊನಾ ವೇಗವಾಗಿ ಹರಡುತ್ತಿದೆ. ಆರೋಗ್ಯವಂತರಲ್ಲೂ ಇದ್ದಕ್ಕಿದ್ದಂತೆ ಸೋಂಕು ಪತ್ತೆಯಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು. ಜಿಂದಾಲ್ ಕಂಪನಿಯಲ್ಲಿ ವೇಗವಾಗಿ ಕೊರೊನಾ ಹರಡುತ್ತಿರುವ ಹಿನ್ನೆಲೆ ಈಗಾಗಲೇ 4 ಸಾವಿರ ಕಾರ್ಮಿಕರನ್ನು ಸ್ಥಳಾಂತರ ಮಾಡಲಾಗಿದೆ. ಕೆಲ ಬಾಯ್ಲರ್ಗಳನ್ನು ನಿಲ್ಲಿಸಲು ಸಾಧ್ಯವಿಲ್ಲ. ಹಾಗಾಗಿ ಜಿಂದಾಲ್ ಫ್ಯಾಕ್ಟರಿ ಬಂದ್ ಮಾಡಲು ಆಗುತ್ತಿಲ್ಲ. ಒಂದು ವೇಳೆ ಸೋಂಕು ಹೆಚ್ಚಾದರೆ ಕಂಪನಿಯನ್ನು ಬಂದ್ ಮಾಡಲಾಗುತ್ತದೆ ಎಂದರು.