ದಾವಣಗೆರೆ: ರಾಜ್ಯ ಸರ್ಕಾರಕ್ಕೆ ಹೊಸ ಸಂಕಷ್ಟ ಶುರುವಾಗುವ ಸಾಧ್ಯತೆ ಹೆಚ್ಚಿದೆ. ಪಂಚಮಸಾಲಿ ಸಮಾಜವನ್ನು 2ಎಗೆ ಸೇರಿಸುವಂತೆ ಆಗ್ರಹಿಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ.
ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ
'ಪಂಚಲಕ್ಷ ಹೆಜ್ಜೆ' ಎಂಬ ಘೋಷವಾಕ್ಯದೊಂದಿಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು. ಪಂಚಮಸಾಲಿ ಸಮಾಜವನ್ನು 2ಎ ಗೆ ಸೇರಿಸಬೇಕು. ಲಿಂಗಾಯತ ಸಮಾಜವನ್ನು ಒಬಿಸಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸು ಮಾಡಬೇಕು. ಹೋರಾಟ ಮಾಡದೇ ಯಾವುದೇ ಸರ್ಕಾರ ನಮ್ಮ ಬೇಡಿಕೆ ಈಡೇರಿಸಲ್ಲ. ಒಂದು ತಿಂಗಳ ಕಾಲ ಕಾಲಾವಕಾಶ ನೀಡಿದ್ದೆವು. ಆದರೆ ಇದಕ್ಕೆ ಸರ್ಕಾರ ಸ್ಪಂದಿಸಿಲ್ಲ. ಪಾದಯಾತ್ರೆ ಹೋಗುವಾಗ ಅನಾಹುತ ಸಂಭವಿಸಿದರೆ ನಾವಾಗಲೀ, ಸಮಾಜವಾಗಲೀ ಹೊಣೆಯಲ್ಲ. ಇದಕ್ಕೆ ಸರ್ಕಾರವೇ ನೇರ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.