ದಾವಣಗೆರೆ: ಕಾಗಿನೆಲೆ ಪೀಠದ ನಿರಂಜನಾನಂದ ಪುರಿ ಶ್ರೀ ಇಂದು ಜಿಲ್ಲೆಯ ಹರಿಹರ ಪಟ್ಟಣದಲ್ಲಿರುವ ಸಾರ್ವಜನಿಕರ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೊನಾ ವ್ಯಾಕ್ಸಿನ್ ಪಡೆದರು.
ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತೆ ಕೊರೊನಾ ಉಲ್ಬಣಗೊಳ್ಳುತ್ತಿರುವ ಬೆನ್ನಲ್ಲೇ ಎಲ್ಲರೂ ಕೊರೊನಾ ಚುಚ್ಚುಮದ್ದು ಹಾಕಿಸಿಕೊಳ್ಳಿ. ಹಿರಿಯರು, ಕಾಯಿಲೆ ಇರುವಂತವರು ತಪ್ಪದೇ ಲಸಿಕೆ ಪಡೆಯಿರಿ. ಜೊತೆಗೆ ಎಲ್ಲರೂ ಜಾಗೃತರಾಗಿದ್ದು, ಕಡ್ಡಾಯವಾಗಿ ಮಾಸ್ಕ್ ಧರಿಸಿ ಎಂದು ಸಲಹೆ ನೀಡಿದರು.
ಜಿಲ್ಲಾಸ್ಪತ್ರೆ ಅಧೀಕ್ಷಕ ಜಯಪ್ರಕಾಶ ನೇತೃತ್ವದಲ್ಲಿ ಶ್ರೀಗಳಿಗೆ ಲಸಿಕೆ ನೀಡಲಾಯಿತು.