ಕಲಬುರಗಿ: ಅವರಾದ, ಮಹಾಗಾಂವ ಹಾಗೂ ಕಮಲಾಪುರ ರೈತ ಸಂಪರ್ಕ ಕೇಂದ್ರಗಳಿಗೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣ ಮಾಲಾಜಿ ದಿಢೀರ್ ಭೇಟಿ ನೀಡಿ, ಬಿತ್ತನೆ ಬೀಜಗಳ ದಾಸ್ತಾನು ಪರಿಶೀಲಿಸಿದರು.
ಸಹಾಯಕ ಕೃಷಿ ನಿರ್ದೇಶಕ ಚಂದ್ರಕಾಂತ ಜೀವಣಗಿ, ರೈತ ಸಂಪರ್ಕ ಕೇಂದ್ರಗಳ ಕೃಷಿ ಅಧಿಕಾರಿಗಳು ಇತರರು ಉಪಸ್ಥಿತರಿದ್ದರು. ರೈತರಿಗೆ ಯಾವುದೇ ತೊಂದರೆ ಆಗದಂತೆ ಬೀಜಗಳನ್ನು ವಿತರಿಸುವಂತೆ ಕೃಷಿ ಅಧಿಕಾರಿಗಳಿಗೆ ಮಾಲಾಜಿ ಅವರು ಸೂಚಿಸಿದರು.
ಪರೀಶಿಲನೆ ಬಳಿಕ, ಜೂನ್ ಆರಂಭ ಆಗಿದ್ದರಿಂದ ಇನ್ನೇನು ಮುಂಗಾರು ಬಿತ್ತನೆ ಕಾರ್ಯ ಚುರುಕುಗೊಳ್ಳಲಿದೆ. ರೈತರಿಗೆ ಬೇಕಾದ ಬಿತ್ತನೆ ಬೀಜಗಳು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನಿನಲ್ಲಿ ಲಭ್ಯವಿದ್ದು, ಯಾರೂ ಆತಂಕ ಪಡಬೇಕಿಲ್ಲ ಎಂದರು.
ರೈತರು ಸರ್ಕಾರ ನಿಗದಿಪಡಿಸಿದ ದರ ಪಾವತಿಸಿ ಬೀಜ ಪಡೆಯಬೇಕು. ಸಾಮಾಜಿಕ ಅಂತರ ಕಾಯ್ದುಕೊಂಡು ಬೀಜ ತೆಗೆದುಕೊಳ್ಳುವಂತೆ ಸಲಹೆ ನೀಡಿದರು.