ದಾವಣಗೆರೆ: 4 ವರ್ಷದ ಹಿಂದೆ ಹೊನ್ನಾಳಿ-ಶಿವಮೊಗ್ಗ ರಸ್ತೆಯ ಅರಕೆರೆಯ ಕರ್ನಾಟಕ ಬ್ಯಾಂಕ್ ಶಾಖೆಗೆ ಕನ್ನ ಹಾಕಿದ್ದ ಕಳ್ಳರು, ಇದೀಗ ಮತ್ತೆ ಅದೇ ಮಾದರಿಯಲ್ಲಿ ಗೋಡೆ ಕೊರೆದು ದರೋಡೆ ಮಾಡಿದ್ದಾರೆ.
ಬ್ಯಾಂಕ್ ಹಿಂಬಂದಿಯ ಗೋಡೆ ಕೊರೆದು ಚಿನ್ನಾಭರಣ, ನಗದು ದೋಚಿದ್ದಾರೆ. ಈ ಹಿಂದೆ 4 ಕೋಟಿ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನವಾಗಿತ್ತು. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಹೊನ್ನಾಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಖದೀಮರ ಹೆಡೆಮುರಿ ಕಟ್ಟಲು 2 ತಂಡಗಳನ್ನು ರಚಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ತಿಳಿಸಿದ್ದಾರೆ. ಸಿಸಿಟಿವಿ ಪರಿಶೀಲನೆ ಜೊತೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡ ಪರಿಶೀಲನೆ ನಡೆಸಿದ್ದು, ದರೋಡೆ ಕೋರರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.