ದಾವಣಗೆರೆ: ಕರ್ನಾಟಕ ರಾಜ್ಯ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಆಗ್ರಹಿಸಿ ದಾವಣಗೆರೆಯಲ್ಲಿ ಕೆಎಸ್ಆರ್ಟಿಸಿ ನೌಕರರು ಪ್ರತಿಭಟನೆ ನಡೆಸಿದರು.
ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಜಾಥಾ ನಡೆಸಿದ ನೌಕರರು, ರಾಜ್ಯ ರಸ್ತೆ ಸಾರಿಗೆಯಲ್ಲಿ ಕೆಲಸ ಮಾಡುವ ನೌಕರರು, ಹಗಲು ರಾತ್ರಿ ಎನ್ನದೆ ಕೆಲಸ ನಿರ್ವಹಿಸುತ್ತಿದ್ದಾರೆ. ಕೆಎಸ್ಆರ್ಟಿಸಿ ಸಂಸ್ಥೆ ವಿಚಾರಗಳಾದ ನೌಕರರ ವರ್ಗಾವಣೆ, ಹೊಸ ಬಸ್ಗಳ ಖರೀದಿ, ಪ್ರಯಾಣಿಕರ ಟಿಕೆಟ್ ದರ ಏರಿಕೆ, ಹೀಗೆ ಹತ್ತು ಹಲವಾರು ವಿಚಾರದಲ್ಲಿ ಸರ್ಕಾರ ಕೆಲಸ ಮಾಡುತ್ತೆ.
ಆದರೆ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ಮಾತ್ರ ಸರ್ಕಾರಿ ನೌಕರರೆಂದು ಪರಿಗಣಿಸದೆ ಕೆಲಸ ಮಾಡಿಸಿಕೊಳ್ಳುತ್ತಿದೆ. ಸರ್ಕಾರದ ಈ ಇಬ್ಬಗೆಯ ನೀತಿಯನ್ನು ಖಂಡಿಸಿ ಪ್ರತಿಭಟನೆ ಮಾಡಲಾಗುತ್ತಿದೆ ಎಂದ ಪ್ರತಿಭಟನಾನಿರತ ನೌಕರರು ಡಿಸಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.