ದಾವಣಗೆರೆ: ತಾಲೂಕಿನ ಕಂದನಕೋವಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿರುವ ಘಟನೆ ಗ್ರಾಮದಲ್ಲಿ ನಡೆದಿದೆ. ರಾತ್ರಿ ವೇಳೆ ಗ್ರಾಮದ ಹೊರವಲಯದ ರಸ್ತೆಯಲ್ಲಿ ಮಲಗಿದ್ದ ಚಿರತೆ ಕಂಡ ಗ್ರಾಮಸ್ಥರು ದಂಗಾಗಿದ್ದಾರೆ.
ಇದೇ ಗ್ರಾಮದ ಯುವಕನೊಬ್ಬ ರಾತ್ರಿ ಬೈಕ್ನಲ್ಲಿ ಹೋಗುತ್ತಿರುವಾಗ ಚಿರತೆ ಕಂಡು ಅಡ್ಡ ಬಂದಿದ್ದರಿಂದ ಗ್ರಾಮದ ಆಸುಪಾಸು ಚಿರತೆ ಇರುವುದು ಖಚಿತವಾಗಿದೆ.
ಕೆಲ ಗ್ರಾಮಸ್ಥರು ಚಿರತೆಯನ್ನು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ. ಕೂಡಲೇ ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.
ಮಾಹಿತಿ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸೆರೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ. ಚಿರತೆ ಕಾಣಿಸಿಕೊಂಡಿದ್ದರಿಂದ ಜಮೀನುಗಳಿಗೆ ತೆರಳಲು ರೈತರು ಹಿಂದೇಟು ಹಾಕುತ್ತಿದ್ದಾರೆ. ರಾತ್ರಿ ಹಾಗೂ ಹಗಲಲ್ಲಿ ಒಂಟಿಯಾಗಿ ತಿರುಗದಂತೆ ಅರಣ್ಯ ಇಲಾಖೆಯ ಸಿಬ್ಬಂದಿ ರೈತರಗಿ ಮತ್ತು ಗ್ರಾಮಸ್ಥರಿಗೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಚಾಮರಾಜನಗರ: ಹಸು ಮೇಯಿಸಲು ಹೋಗಿದ್ದ ರೈತನ ಕೊಂದ ಚಿರತೆ