ದಾವಣಗೆರೆ: ನಗರದಲ್ಲಿ ಮಹಾನಗರ ಪಾಲಿಕೆ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಮತಗಟ್ಟೆಗೆ ಬಂದು ಮತ ಚಲಾಯಿಸಿದರು.
ಶಿವಶಂಕರಪ್ಪ ಎಂಸಿಸಿಬಿ ಬ್ಲಾಕ್ನ ಐಎಂಎ ಹಾಲ್ ನಲ್ಲಿ ತೆರೆಯಲಾಗಿದ್ದ 38ನೇ ವಾರ್ಡ್ನ ಮತಗಟ್ಟೆ 318ರ ಮತ ಕೇಂದ್ರದಲ್ಲಿ ಹಕ್ಕು ಚಲಾಯಿಸಿದರು. ಬಳಿಕ ಮಾತನಾಡಿದ ಅವರು, ಈ ಬಾರಿ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್ ಮಾಡಲಿದೆ. ಕಳೆದ ಬಾರಿಯಂತೆ ಈ ಬಾರಿಯೂ ನಾವೇ ಅಧಿಕಾರದ ಗದ್ದುಗೆ ಹಿಡಿಯಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯ ರಾಜಕಾರಣದ ಬಗ್ಗೆ ಮಾತನಾಡಲು ನಿರಾಕರಿಸಿದ ಅವರು, ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರ ಬಗ್ಗೆಯಾಗಲೀ, ಬೇರೆಯವರ ಕುರಿತಾಗಲೀ ಮಾತನಾಡಲ್ಲ ಎಂದು ಹೇಳಿದರು.