ದಾವಣಗೆರೆ : ಲಾಕ್ಡೌನ್ ಉಲ್ಲಂಘನೆ ಮಾಡುವವರ ವಿರುದ್ಧ ಮತ್ತಷ್ಟು ಕಠಿಣ ಕ್ರಮಕ್ಕೆ ಮುಂದಾಗಿರುವ ಪೊಲೀಸ್ ಇಲಾಖೆ ಅನಗತ್ಯ ಬೀದಿಗಿಳಿದ ವಾಹನಗಳನ್ನು ಜಪ್ತಿ ಮಾಡುತ್ತಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಕಳೆದ ಎರಡು ದಿನಗಳ ಹಿಂದೆಯಷ್ಟೇ ಎಚ್ಚರಿಕೆ ನೀಡಿದ್ದರು. ಪದೇಪದೆ ಲಾಕ್ಡೌನ್ ನಿಯಮ ಉಲ್ಲಂಘಿಸುವ ಪ್ರಕರಣ ಹೆಚ್ಚಾದ ಹಿನ್ನೆಲೆಯಲ್ಲಿ ಪ್ರಮುಖ ರಸ್ತೆಗಳಲ್ಲಿ ವಾಹನಗಳನ್ನು ಸೀಜ್ ಮಾಡಿದ್ದಾರೆ.
ಲಾಠಿ ಪ್ರಯೋಗವಿಲ್ಲ, ಏನಿದ್ರೂ ಇನ್ನು ಮುಂದೆ ಬೈಕ್ ಸೀಜ್ ಅಸ್ತ್ರ ಬಳಕೆ ಮುಂದುವರಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.