ETV Bharat / state

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿವಾಸದಲ್ಲಿ ಲೋಕಾಯುಕ್ತರಿಂದ ಲಕ್ಷಾಂತರ ನಗದು, ಚಿನ್ನಾಭರಣ ಜಪ್ತಿ

author img

By

Published : Mar 4, 2023, 9:28 AM IST

ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರ ನಿವಾಸದ ಮೇಲೆ ಲೋಕಾಯುಕ್ತ ದಾಳಿ - ಸತತ ಪರಿಶೀಲನೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು - ಲಕ್ಷಾಂತರ ರೂಪಾಯಿ ನಗದು, ಚಿನ್ನ ಹಾಗೂ ಬೆಳ್ಳಿ ಆಭರಣ ಜಪ್ತಿ

lokayukta-raid-on-mla-madal-virupakshappa-residence
ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿವಾಸದಲ್ಲಿ ಲೋಕಾಯುಕ್ತರಿಂದ ಲಕ್ಷಾಂತರ ನಗದು, ಚಿನ್ನಾಭರಣ ಜಪ್ತಿ

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ಚನ್ನೇಶಪುರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ನಡೆಸಿದ ವೇಳೆ ಸತತ 10ಕ್ಕೂ ಹೆಚ್ಚು ಗಂಟೆಗಳ ಕಾಲ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಶಾಸಕರ ನಿವಾಸದಲ್ಲಿ ಒಟ್ಟು 16.5 ಲಕ್ಷ ನಗದು, 2,800 ಗ್ರಾಂ ಚಿನ್ನ ಹಾಗೂ 20 ಕೆಜಿ ಬೆಳ್ಳಿ ಹಾಗೂ ಅಪಾರ ಪ್ರಮಾಣದ ಆಸ್ತಿ ದಾಖಲೆ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಶಾಸಕರ ಪುತ್ರ ಪ್ರಶಾಂತ್​ ಮಾಡಾಳ್​ ಲಂಚ ಸ್ವೀಕರಿಸುತ್ತಿರುವಾಗ ಸಿಕ್ಕಿಬಿದ್ದ ಬೆನ್ನಲ್ಲೇ ಚನ್ನಗಿರಿಯಲ್ಲೂ ಲೋಕಾಯುಕ್ತರು ದಾಳಿ ನಡೆಸಿದ್ದರು.

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮನೆ ಮೇಲೆ ಶುಕ್ರವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ 20ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ರಾತ್ರಿ ತನಕ ಪರಿಶೀಲನೆ ನಡೆಸಿದ್ದಾರೆ. ಇದಕ್ಕೂ ಮುನ್ನ ಲೋಕಾಯುಕ್ತ ಅಧಿಕಾರಿಗಳು ಚನ್ನಗಿರಿ ತಾಲೂಕಿ‌ನ ಮಾವಿನಹೊಳೆ ಬಳಿಯ ಶಾಸಕ ವಿರೂಪಾಕ್ಷಪ್ಪನವರ ಕುಟುಂಬಕ್ಕೆ ಸೇರಿದ ಕ್ರಶರ್, ಕಚೇರಿ ಹಾಗೂ ಮಾವಿನಕಟ್ಟಿ ಬಳಿಯ ಮಾಡಾಳ್ ಕುಟುಂಬದ ತೋಟ ಹಾಗೂ ಖೇಣಿ ಮನೆಯಲ್ಲಿ ಶೋಧ ನಡೆಸಿದ್ದರು.

lokayukta-raid-on-mla-madal-virupakshappa-residence
ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿವಾಸದಲ್ಲಿ ಲೋಕಾಯುಕ್ತರಿಂದ ಪರಿಶೀಲನೆ

ಸತತ ಹತ್ತು ಗಂಟೆಗಳ‌ ಕಾಲ ಮಾಡಾಳ್ ಮನೆ ಶೋಧ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಅಲ್ಲಿ ದೊರೆತ ನಗದು, ಚಿನ್ನ, ಬೆಳ್ಳಿ ಹಾಗೂ ಆಸ್ತಿ ಪತ್ರಗಳನ್ನು ಪಟ್ಟಿ ಮಾಡಿ ವಶಪಡಿಸಿಕೊಂಡಿದ್ದಾರೆ. ಬಳಿಕ ಮನೆಯಲ್ಲಿರುವ ಶಾಸಕ ಮಾಡಾಳ್ ಪತ್ನಿ ಲೀಲಾವತಿ ಅವರಿಗೆ ಪಟ್ಟಿಯ ಪ್ರತಿ ನೀಡಿ ಲೋಕಾಯುಕ್ತ ಪೊಲೀಸರು ಸಹಿ ಪಡೆದಿದ್ದಾರೆ. 16.5 ಲಕ್ಷ ನಗದು, 2,800 ಗ್ರಾಂ ಚಿನ್ನ ಹಾಗೂ 20 ಕೆಜಿ ಬೆಳ್ಳಿ ಹಾಗೂ ಅಪಾರ ಪ್ರಮಾಣದ ಆಸ್ತಿ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ‌ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಟೆಂಡರ್​ ಮೂಲಕ ಎಲೆಕ್ಷನ್​ಗೆ ಕಲೆಕ್ಷನ್​ ಮಾಡುತ್ತಿರುವ ಬಿಜೆಪಿ: ಆರು ತಿಂಗಳ ಟೆಂಡರ್ ರದ್ದು ಮಾಡಿ.. ಪ್ರಿಯಾಂಕ್ ಖರ್ಗೆ

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದ ಶಾಸಕರ ಪುತ್ರ: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆಗೆ ರಾಸಾಯನಿಕ ಪೂರೈಸುವ ಟೆಂಡರ್​ ಸಂಬಂಧ 40 ಲಕ್ಷ ರೂಪಾಯಿ ಲಂಚ ಸ್ವೀಕರಿಸುವ ವೇಳೆ ಗುರುವಾರ ಶಾಸಕ ವಿರೂಪಾಕ್ಷ ಮಾಡಾಳ್​ ಪುತ್ರ ಪ್ರಶಾಂತ್​ ಮಾಡಾಳ್ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದರು. ಬೆಂಗಳೂರಿನ ಕ್ರೆಸೆಂಟ್​ ರಸ್ತೆಯ ತಮ್ಮ ಕಚೇರಿಯಲ್ಲಿಯೇ ಲೋಕಾಯುಕ್ತರ ಬಲೆಗೆ ಬಿದ್ದಿದ್ದರು. ಬಳಿಕ ತನಿಖೆ ಮುಂದುವರೆಸಿದ್ದ ಲೋಕಾಯುಕ್ತ ಅಧಿಕಾರಿಗಳು ಪ್ರಶಾಂತ್​ ಮಾಡಾಳ್​ ಮನೆಯಲ್ಲಿ ಪತ್ತೆಯಾದ 6 ಕೋಟಿ ರೂಪಾಯಿ ನಗದು ಹಣವನ್ನು ಜಪ್ತಿ ಮಾಡಿಕೊಂಡಿದ್ದರು.

ನ್ಯಾಯಾಂಗ ಬಂಧನ: ಪ್ರಕರಣ ಸಂಬಂಧ ಪ್ರಶಾಂತ್ ಮಾಡಾಳ್ ಹಾಗೂ ಐವರನ್ನು ಬಂಧಿಸಲಾಗಿದೆ. ಬಂಧಿತ ಈ ಐವರಿಗೂ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಶುಕ್ರವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಇವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ವಿಚಾರಣೆ, ಪರಿಶೀಲನೆ ಇನ್ನೂ ಬಾಕಿ ಇರುವ ಕಾರಣ ಕಸ್ಟಡಿಗೆ ನೀಡುವಂತೆ ಅಧಿಕಾರಿಗಳು ಮನವಿ ಮಾಡಿದ್ದರು.

ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ : ಲಂಚ ಸ್ವೀಕಾರ ಪ್ರಕರಣದ ಬೆನ್ನಲ್ಲೇ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ವಿರೂಪಾಕ್ಷಪ್ಪ ಮಾಡಾಳ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ ವಿರೂಪಾಕ್ಷಪ್ಪ ಅವರು ರಾಜೀನಾಮೆ ಸಲ್ಲಿಸಿದ್ದು, ಆಪ್ತರ ಮೂಲಕ ಸಿಎಂ ಕಚೇರಿಗೆ ರಾಜೀನಾಮೆ ಪತ್ರ ರವಾನಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.