ETV Bharat / state

ಹಳಬರನ್ನು ಕೈಬಿಟ್ಟು ಹೊಸಬರಿಗೆ ಸಚಿವ ಸ್ಥಾನ ನೀಡಿ : ಮಾಡಾಳ್ ವಿರೂಪಾಕ್ಷಪ್ಪ - ಸಚಿವ ಸಂಪುಟ ವಿಸ್ತರಣೆ ಸುದ್ದಿ

ಮೋದಿ ಅವರೇ ಯಡಿಯೂರಪ್ಪ ಸಿಎಂ ಆಗಿ ಅವಧಿ ಪೂರ್ಣಗೊಳಿಸ್ತಾರೆ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ‌. ದಕ್ಷಿಣ ಭಾರತದಲ್ಲಿ ಕಮಲ ಅರಳಿಸಿದ ಬಿಎಸ್​ವೈ ಅವರನ್ನು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ..

madal-virupakshappa
ಮಾಡಾಳ್ ವಿರೂಪಾಕ್ಷಪ್ಪ
author img

By

Published : Nov 24, 2020, 4:08 PM IST

ದಾವಣಗೆರೆ : ಸಚಿವ ಸಂಪುಟ ವಿಸ್ತರಣೆ ವೇಳೆ ಹಳಬರನ್ನು ಕೈಬಿಟ್ಟು ಹೊಸಬರಿಗೆ ಆದ್ಯತೆ ನೀಡಬೇಕು. ಹಿರಿಯ ಸಚಿವರನ್ನು ಪಕ್ಷದ ಸಂಘಟನೆಗೆ ಬಳಸಿಕೊಂಡು ಕಿರಿಯರಿಗೆ ಸಚಿವ ಸ್ಥಾನ ನೀಡಿದರೆ ಆಡಳಿತದಲ್ಲಿ ಚುರುಕು ಕಾಣುತ್ತದೆ‌. ಜೊತೆಗೆ ಪಕ್ಷವೂ ಮತ್ತಷ್ಟು ಶಕ್ತಿಶಾಲಿಯಾಗುತ್ತದೆ ಎಂದು ಬಿಜೆಪಿಯ ಹಿರಿಯ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅಭಿಪ್ರಾಯಪಟ್ಟಿದ್ದಾರೆ.

ಹಳಬರನ್ನು ಕೈಬಿಟ್ಟು ಹೊಸಬರಿಗೆ ಸಚಿವ ಸ್ಥಾನ ನೀಡಿ.. ಮಾಡಾಳ್ ವಿರೂಪಾಕ್ಷಪ್ಪ

ಅಪೂರ್ವ ರೆಸಾರ್ಟ್‌ನಲ್ಲಿ‌ ಮಾತನಾಡಿದ ಅವರು, ದಾವಣಗೆರೆ ಜಿಲ್ಲೆಯವರಿಗೆ ಸಚಿವ ಸ್ಥಾನ ನೀಡಬೇಕೆಂಬ ಬೇಡಿಕೆಗೆ ನನ್ನ ಸಹಮತವೂ ಇದೆ. ಯಾರಿಗಾದಾರೂ ನೀಡಲಿ. ಜಿಲ್ಲೆಯ ಶಾಸಕರಿಗೆ ನೀಡಿದರೆ ಅಭಿವೃದ್ಧಿ ಕಾರ್ಯಗಳು ಚುರುಕಾಗಲಿವೆ.

ಸಿಎಂ ಯಡಿಯೂರಪ್ಪರಿಗೆ ಈ ಬಗ್ಗೆ ನಾವು ಗಮನಕ್ಕೆ ತಂದಿದ್ದೇವೆ ಎಂದು ತಿಳಿಸಿದರು. ಪ್ರಧಾನಿ‌ ನರೇಂದ್ರ ಮೋದಿ ಗುಜರಾತ್ ಸಿಎಂ ಆಗಿದ್ದಾಗ ರಾಜ್ಯದಲ್ಲಿ ಯಡಿಯೂರಪ್ಪ ಅವರೂ ಮುಖ್ಯಮಂತ್ರಿ ಆಗಿದ್ದರು.

ಇಬ್ಬರ ನಡುವೆ ಉತ್ತಮ ಬಾಂಧವ್ಯ ಇದೆ. ಮೋದಿ ಅವರೇ ಯಡಿಯೂರಪ್ಪ ಸಿಎಂ ಆಗಿ ಅವಧಿ ಪೂರ್ಣಗೊಳಿಸ್ತಾರೆ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ‌. ದಕ್ಷಿಣ ಭಾರತದಲ್ಲಿ ಕಮಲ ಅರಳಿಸಿದ ಬಿಎಸ್​ವೈ ಅವರನ್ನು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದರು‌.

ವೀರಶೈವ-ಲಿಂಗಾಯತ ಪ್ರಾಧಿಕಾರ ರಚಿಸಿ 500 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿರುವುದು ಸ್ವಾಗತಾರ್ಹ. ಜನಸಂಖ್ಯೆಗೆ ಅನುಗುಣವಾಗಿ ಅನುದಾನ ನೀಡಲಾಗಿದೆ. ಬೇರೆ ಬೇರೆ ಸಮುದಾಯಗಳ ಪ್ರಾಧಿಕಾರ ರಚಿಸಲಾಗಿದೆ. ಯಾರೂ ವಿರೋಧ ವ್ಯಕ್ತಪಡಿಸಿಲ್ಲ. ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಬಂದ್‌ಗೆ ಕರೆ ನೀಡಿರುವುದು ಸರಿಯಲ್ಲ ಎಂದು ಮಾಡಾಳ್ ವಿರೂಪಾಕ್ಷಪ್ಪ ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.