ದಾವಣಗೆರೆ : ಜಿಲ್ಲೆಯಲ್ಲಿ ಇದುವರೆಗೂ ಯಾವುದೇ ಕೊರೊನಾ ವೈರಸ್ ಸೋಂಕು ಪ್ರಕರಣ ವರದಿಯಾಗಿಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಸ್ಪಷ್ಟಪಡಿಸಿದ್ದಾರೆ.
ಕಳೆದ ಮಾರ್ಚ್ 4 ರಿಂದ 15 ರವರೆಗೆ ಜಿಲ್ಲೆಯಲ್ಲಿ ಒಟ್ಟು 41 ಮಂದಿ ವಿದೇಶ ಪ್ರಯಾಣ ಮುಗಿಸಿ ಬಂದಿದ್ದಾರೆ. ಒಬ್ಬರು 28 ದಿನಗಳ ಅವಲೋಕನ ಅವಧಿ ಹಾಗೂ 14 ಜನರು 14 ದಿನಗಳ ಅವಲೋಕನ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. ಒಟ್ಟು 31 ಜನರನ್ನು ಮನೆಯಲ್ಲೇ ಪ್ರತ್ಯೇಕವಾಗಿ ಇರಿಸಲ್ಪಟ್ಟಿದ್ದು, ಯಾರನ್ನೂ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಿಲ್ಲ ಎಂದರು.
ಕೊರೊನೊ ವೈರಸ್ ಪರೀಕ್ಷೆಗಾಗಿ ನಾಲ್ವರ ಮಾದರಿಗಳನ್ನು ಕಳುಹಿಸಲಾಗಿದ್ದು, ನಾಲ್ಕೂ ಮಾದರಿಗಳು ನೆಗೆಟಿವ್ ಎಂದು ಫಲಿತಾಂಶ ಬಂದಿದ್ದು, ಯಾವುದೇ ಖಚಿತಪಟ್ಟ ಪ್ರಕರಣಗಳು ಇಲ್ಲ ಎಂದು ಡಿಸಿ ಮಾಹಿತಿ ನೀಡಿದ್ದಾರೆ.